ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 6 ರಿಂದ 14 ವರ್ಷದೊಳಗಿನ ಪ್ರತಿಭಾವಂತ ಮಕ್ಕಳಿಗೆ ಚಿಗುರು ಕಾರ್ಯಕ್ರಮ, 15 ರಿಂದ 30 ವರ್ಷದೊಳಗಿನ ಪ್ರತಿಭಾವಂತ ಯುವ ಕಲಾವಿದರಿಗೆ ಯುವ ಸೌರಭ ಮತ್ತು ಆಕಾಶವಾಣಿ ಬಿ ಹೈಗ್ರೇಡ್ ಹಾಗೂ ಸರಕಾರದಿಂದ ನೀಡುವ ಪ್ರಶಸ್ತಿ ಪುರಸ್ಕೃತ ಕಲಾವಿದರಿಂದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್ 27 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ದೂ. ಸಂ: 0820-2986168 ಅನ್ನು ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.