ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘದ (ಟಿಎಪಿಸಿಎಂಎಸ್) ನಿರ್ದೇಶಕರಾಗಿ ಸಹಕಾರಿ ಧುರೀಣ, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ 4ನೇ ಬಾರಿಗೆ ಆಯ್ಕೆಯಾಗಿದ್ದಾರೆ.
ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಕಳೆದ 25 ವರ್ಷಗಳಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಎಸ್. ರಾಜು ಪೂಜಾರಿಯವರು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿ, ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷರಾಗಿ, ದಕ್ಷಿಣ ಕನ್ನಡ ಕೃಷಿ ಅಭಿವೃದ್ದಿ ಸಹಕಾರ ಸಂಘದ (ಸ್ಕ್ಯಾಡ್ಸ್) ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.