ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಮರವಂತೆ ಗ್ರಾಮ ಪಂಚಾಯತಿ ಗ್ರಂಥಾಲಯದಲ್ಲಿ ನಡೆದ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ, ಮಕ್ಕಳ ಹಕ್ಕುಗಳ ಗ್ರಾಮ ಸಭೆ ಹಾಗೂ ಓದುವ ಬೆಳಕು ಕಾರ್ಯಕ್ರಮಕ್ಕೆ ಚಾಲನೆ ನಿಡಲಾಯಿತು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೈಂದೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭಾರತಿ, ಮಕ್ಕಳು ದೇಶದ ಸಂಪತ್ತು. ಅವರಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕು, ಕೊರೊನಾ ನಿರ್ಬಂಧದ ಕಾರಣ ಮಕ್ಕಳು ಶಿಕ್ಷಣ ಮತ್ತು ಓದಿನಿಂದ ವಿಮುಖರಾಗಬಾರದು ಎನ್ನುವ ಉದ್ದೇಶದಿಂದ ಸರ್ಕಾರ ಗ್ರಾಮ ಪಂಚಾಯತಿ ಮತ್ತು ಗ್ರಂಥಾಲಯದ ಮೂಲಕ ಓದುವ ಬೆಳಕು ಕಾರ್ಯಕ್ರಮ ಹಮ್ಮಿಕೊಂಡಿದೆ. ಅದರ ಅಧೀನ 6ರಿಂದ 18 ವರ್ಷದೊಳಗಿನ ಮಕ್ಕಳಿಗೆ ಉಚಿತವಾಗಿ ಗ್ರಂಥಾಲಯದ ಸದಸ್ಯತ್ವ ನೀಡಿ, ಓದಲು ಪುಸ್ತಕಗಳನ್ನು ನೀಡಲಾಗುತ್ತದೆ. ಪ್ರತಿಯೊಬ್ಬರೂ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.
ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಭಾವ ಚಿತ್ರಕ್ಕೆ ಹೂಮಾಲೆ ಹಾಕುವ ಮೂಲಕ ಮಕ್ಕಳ ದಿನ ಆಚರಿಸಲಾಯಿತು. ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಶ್ರಾವ್ಯಾ ಆಚಾರ್ಯ ಅವರನ್ನು ಗೌರವಿಸಲಾಯಿತು.
ಗ್ರಾಮ ಪಂಚಾಯಿತಿ ಸಿಬ್ಬಂದಿ ಶೇಖರ್ ಮರವಂತೆ ಸ್ವಾಗತಿಸಿ, ನಿರೂಪಿಸಿದರು. ಗುರುರಾಜ್ ವಂದಿಸಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಸತ್ಯನಾ ಕೊಡೇರಿ, ಪಂಚಾಯಿತಿ ಕಾರ್ಯದರ್ಶಿ ದಿನೇಶ್ ಶೇರುಗಾರ್, ಗ್ರಂಥಾಲಯ ಸಹಾಯಕಿ ಶ್ಯಾಮಲಾ ಇದ್ದರು.