ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರಾವಳಿಯ ವಿಶಿಷ್ಟ, ವಿಶೇಷ ಪರಂಪರೆ ಉಪ್ಪಿನಕುದ್ರು ಗೊಂಬೆಯಾಟ ರಂಗಭೂಮಿಯ ಹರಿಕಾರ, ಸೂತ್ರ ಕ್ರೀಡೆಯ ಗಾರುಡಿಗ ಕೊಗ್ಗ ದೇವಣ್ಣಕಾಮತ್‌ರ ಹೆಸರಿನಲ್ಲಿ ನೀಡುವ 2020-21 ರ ಸಾಲಿನ ಪ್ರಶಸ್ತಿಯನ್ನು ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿ, ಉಪ್ಪಿನಕುದ್ರು ಇದರ ಅರ್ಥಧಾರಿ ನಾರಾಯಣ ಬಿಲ್ಲವರಿಗೆ ನೀಡಲು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಸಮಿತಿ ಆಯ್ಕೆ ಮಾಡಲಾಗಿದೆ
2021 ಜನವರಿಯಲ್ಲಿ ನಡೆಯುವ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ಭಾಗವಹಿಸುವ ವಿಶೇಷ ಗಣ್ಯರಿಂದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ.