ಅಕ್ರಮ ಬೇಟೆಗಾರರ ಬೆನ್ನತ್ತಿದ ಅರಣ್ಯ ಇಲಾಖೆ ಸಿಬ್ಬಂದಿಗಳು. ಬೊಲೆರೊ ವಶಕ್ಕೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಹರ್ಕೂರು ಮೀಸಲು ಅರಣ್ಯ ಪ್ರದೇಶದಲ್ಲಿ ಆಕ್ರಮವಾಗಿ ಬೇಟೆಗೆ ಮುಂದಾಗಿದ್ದ ತಂಡದ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿದ್ದು, ಅಧಿಕಾರಿಗಳನ್ನು ಕಂಡು ಬೇಟೆಗಾರರು ಪರಾರಿಯಾದ ಘಟನೆ ನಡೆದಿದೆ.

Call us

Click Here

ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ್ ಕುಲಾಲ್ ನೇತೃತ್ವದ ತಂಡ ಬುಧವಾರ ತಡರಾತ್ರಿ 2 ಗಂಟೆಗೆ ಗಸ್ತು ತಿರುಗುತ್ತಿದ್ದ ವೇಳೆ, ಹರ್ಕೂರು ಮೀಸಲು ಅರಣ್ಯದಲ್ಲಿ ಬೊಲೆರೊ ವಾಹನ ಅನುಮಾನಾಸ್ಪದ ರೀತಿಯಲ್ಲಿ ಸಂಚರಿಸುತ್ತಿತ್ತು. ಈ ವೇಳೆ ವಿಚಾರಣೆಗೆ ಮುಂದಾಗಿದ್ದ ಅಧಿಕಾರಿಗಳನ್ನು ಕಂಡು ಪರಾರಿಯಾಗಲು ಯತ್ನಿಸಿದರು. ಈ ವೇಳೆ ಅಧಿಕಾರಿಗಳು ಬೆನ್ನಟ್ಟಿದ ಪರಿಣಾಮ ಕಾರು ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದು, ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ವಾಹನ ಹಾಗೂ ಬೇಟೆಗೆ ಬಳಸಿದ್ದ ಕಬ್ಬಿಣದ ರಾಡ್, ಟಾರ್ಪಲ್ ಹಾಗೂ ಮೊಬೈಲ್ ಪೋನ್ ವಶಪಡಿಸಿಕೊಳ್ಳಲಾಗಿದೆ.

ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್, ಉಪ ವಲಯ ಅರಣ್ಯಾಧಿಕಾರಿ ದಿಲೀಪ್, ಅರಣ್ಯ ರಕ್ಷಕರಾದ ಮಂಜುನಾಥ ನಾಯ್ಕ್, ಬಂಗಾರಪ್ಪ, ಜೀಪು ಚಾಲಕ ಅಶೋಶ್ ಕಾರ್ಯಾಚರಣೆಯಲ್ಲಿ ಇದ್ದರು.

Leave a Reply