ಪಡಿತರದಲ್ಲಿ ಗುಣಮಟ್ಟದ ಕುಚ್ಚಿಗೆ ಅಕ್ಕಿ ನೀಡಿ: ದಿನಕರ ಬಾಬು

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯ ಪಡಿತರ ಅಂಗಡಿಗಳಲ್ಲಿ ವಿತರಿಸಲಾಗುತ್ತಿರುವ ಬಿಳಿ ಕುಚ್ಚಿಗೆ ಅಕ್ಕಿಯ ಗುಣಮಟ್ಟ ಕಡಿಮೆಯಿದ್ದು, ಉತ್ತಮ ಗುಣಮಟ್ಟದ ಕುಚ್ಚಿಗೆ ಅಕ್ಕಿಯನ್ನು ಪೂರೈಸುವ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಸೂಚಿಸಿದರು.

Call us

Click Here

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪಡಿತರ ವ್ಯವಸ್ಥೆಯಲ್ಲಿ ಜಿಲ್ಲೆಗೆ ಕುಚ್ಚಿಗೆ ಅಕ್ಕಿ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಅದರಂತೆ ಜಿಲ್ಲೆಗೆ ಕುಚ್ಚಿಗೆ ಅಕ್ಕಿ ಸರಬರಾಜು ಆಗುತ್ತಿದೆ. ಆದರೆ ಈ ಅಕ್ಕಿಯ ಗುಣಮಟ್ಟ ಸರಿಯಿಲ್ಲವೆಂದು ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿದೆ. ಉತ್ತಮ ಗುಣಮಟ್ಟದ ಕೆಂಪು ಕುಚ್ಚಿಗೆ ಅಕ್ಕಿಯನ್ನು ಪಡಿತರ ಅಂಗಡಿಗಳಲ್ಲಿ ವಿತರಿಸಿ, ಈ ಬಗ್ಗೆ ಪಡಿತರ ಸರಬರಾಜು ಮಾಡುವ ಆಹಾರ ನಿಗಮಕ್ಕೆ ಪತ್ರ ಬರೆಯುವಂತೆ ಅಧ್ಯಕ್ಷರು ಸೂಚಿಸಿದರು.

ಜಿಲ್ಲೆಗೆ ಪ್ರಸ್ತುತ ಸರಬರಾಜು ಆಗುತ್ತಿರುವ ಕುಚ್ಚಿಗೆ ಆಂಧ್ರ ಪ್ರದೇಶದಿಂದ ಸರಬರಾಜು ಆಗುತ್ತಿದ್ದು, ಜಿಲ್ಲೆಯಲ್ಲಿ ಬೆಳೆಯುವ ಸ್ಥಳೀಯ ಕುಚ್ಚಿಗೆ ಅಕ್ಕಿ ಅಗತ್ಯ ಪ್ರಮಾಣದಲ್ಲಿ ಪಡಿತರ ಸರಬರಾಜು ವ್ಯವಸ್ಥೆಗೆ ದೊರೆಯುತ್ತಿಲ್ಲ ಎಂದು ಆಹಾರ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.

ಬೇರೆ ರಾಜ್ಯಗಳಲ್ಲಿ ಕೆಂಪು ಕುಚ್ಚಿಗೆ ಬೆಳೆಯುತ್ತಿದ್ದಲ್ಲಿ ಆ ಅಕ್ಕಿಯನ್ನು ಜಿಲ್ಲೆಗೆ ಸರಬರಾಜು ಮಾಡಲು ಆಹಾರ ನಿಗಮಕ್ಕೆ ಪತ್ರ ಬರೆಯುವಂತೆ ಅಧ್ಯಕ್ಷರು ಸೂಚಿಸಿದರು.

Click here

Click here

Click here

Click Here

Call us

Call us

ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಕುರಿತಂತೆ ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲ ಎಂದು ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ ತಿಳಿಸಿದರು, ಜಿಲ್ಲೆಗೆ ಸರಬರಾಜು ಆಗುವ ಪ್ಲಾಸ್ಟಿಕ್‌ನ್ನು ನಿಷೇಧಿಸಿದರೆ, ಸಮರ್ಪಕ ಅನುಷ್ಠಾನ ಸಾಧ್ಯವಾಗಲಿದೆ. ಆದ್ದರಿಂದ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಸರಬರಾಜು ಮಾಡುವ ಸಗಟು ವ್ಯಾಪಾರಿಗಳ ಬಳಿ ಇರುವ ಪ್ಲಾಸ್ಟಿಕ್ ವಶಪಡಿಸಿಕೊಳ್ಳುವಂತೆ ನಗರಾಭಿವೃಧ್ದಿ ಕೋಶದ ಅಧಿಕಾರಿಗಳಿಗೆ ಸೂಚಿಸಿದ ಅಧ್ಯಕ್ಷರು, ಗ್ರಾಮೀಣ ಪ್ರದೇಶದಲ್ಲಿ ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಎಲ್ಲಾ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.

ಪ್ಲಾಸ್ಟಿಕ್ ಚೀಲಗಳ ದರ ಕಡಿಮೆಯಿರುವುದರಿಂದ ಅದಕ್ಕೆ ಪರ್ಯಾಯವಾಗಿ ಅದೇ ದರದಲ್ಲಿ ಬಟ್ಟೆಯ ಉತ್ಪನ್ನಗಳನ್ನು ಸರಬರಾಜು ಮಾಡಿದ್ದಲ್ಲಿ ಪ್ಲಾಸ್ಟಿಕ್ ನಿಷೇಧ ಸಾಧ್ಯವಾಗಲಿದೆ. ಈ ಬಗ್ಗೆ ಅಧಿಕಾರಿಗಳು ಯೋಜನೆ ರೂಪಿಸುವಂತೆ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗಡೆ ಮಾರಾಳಿ ತಿಳಿಸಿದರು.

ಜಲ ಜೀವನ್ ಮಿಷನ್ ಯೋಜನೆಯಡಿ ನೀರಿನ ಸಂಪರ್ಕ ನೀಡುವಾಗ, ಶಾಲೆಗಳು ಮತ್ತು ಅಂಗನವಾಡಿಗಳಿಗೂ ಸಹ ಸಂಪರ್ಕ ನೀಡುವಂತೆ ತಿಳಿಸಿದ ಅಧ್ಯಕ್ಷರು, ವಿಕಲಚೇತನರಿಗೆ ಮೀಸಲಿಟ್ಟಿರುವ ಅನುದಾನದಲ್ಲಿ, ವಿಕಲಚೇತನರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿ, ಅನುದಾನದ ಸಂಪೂರ್ಣ ಸದ್ವಿನಿಯೋಗ ಮಾಡಬೇಕು, ಎಲ್ಲಾ ಇಲಾಖೆಗಳು ನಿಗಧಿತ ಅವಧಿಯೊಳಗೆ ಗುರಿ ಸಾಧಿಸಲು ಕಾಯೋನ್ಮುಖವಾಗುವಂತೆ ಸೂಚಿಸಿದರು.

ಸಭೆಯಲ್ಲಿ ಜಿ.ಪಂ. ಸಿಇಓ ಡಾ. ನವೀನ್ ಭಟ್, ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಪುತ್ರನ್, ಉಪಸ್ಥಿತರಿದ್ದರು.

Leave a Reply