ಕುಂದಾಪ್ರಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ಕನ್ನಡದ ನಾಡು ನುಡಿ ಕುರಿತಾದ ರಾಜ್ಯಮಟ್ಟದ ಕವನ ಸ್ಪರ್ಧೆಯಲ್ಲಿ ಉಪನ್ಯಾಸಕ ಮತ್ತು ಬರಹಗಾರ ನರೇಂದ್ರ ಎಸ್ ಗಂಗೊಳ್ಳಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.