ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ನೊಂದಾಯಿತ ಸಾಂಸ್ಕೃತಿಕ ಸಂಘ ಸಂಸ್ಥೆಗಳು ಏರ್ಪಡಿಸುವ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ, ಅಸಂಘಟಿತ ತಂಡಗಳು / ಏಕವ್ಯಕ್ತಿ ಕಲಾವಿದರಿಗೆ ವಾದ್ಯ ಪರಿಕರ / ವೇಷಭೂಷಣ ಖರೀದಿಗೆ ಹಾಗೂ ಚಿತ್ರಕಲೆ ಮತ್ತು ಶಿಲ್ಪಕಲೆಗಳ ಏಕವ್ಯಕ್ತಿ / ತಂಡದ ಕಲಾವಿದರಿಗೆ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲು ಧನಸಹಾಯ ನೀಡಲು Sevasindhu.karnataka.gov.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 27 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22230282 / 080-22279954 ಸಂಪರ್ಕಿಸುವಂತೆ ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರ ಪ್ರಕಟನೆ ತಿಳಿಸಿದೆ.