ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಟ್ಕಳ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್‌ನ ಮುಂಭಾಗದ ಟಯರ್ ಸ್ಪೋಟಗೊಂಡು ಪಕ್ಕದ ರಸ್ತೆಗೆ ಪಲ್ಟಿಯಾದ ಘಟನೆ ಹೆಮ್ಮಾಡಿಯಲ್ಲಿ ನಡೆದಿದೆ. ಘಟನೆಯಲ್ಲಿ ಟ್ಯಾಂಕರ್ ಚಾಲಕ ಹಾಗೂ ಕ್ಲೀನರ್‌ಗೆ ಸಣ್ಣಪುಟ್ಟ ಗಾಯಗಳಾಗಿದೆ.
ವೇಗವಾಗಿ ಬರುತ್ತಿದ್ದ ಟ್ಯಾಂಕರ್ ಮುಂಭಾಗದ ಟಯರ್ ಸ್ಪೋಟಗೊಂಡು ಹೆಮ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಮಧ್ಯದಲ್ಲಿರುವ ಬೀದಿದೀಪಕ್ಕೆ ಡಿಕ್ಕಿಯಾಗಿ ಪಕ್ಕದ ರಸ್ತೆಗೆ ಅಡ್ಡಲಾಗಿ ಮಗುಚಿ ಬಿದ್ದಿದೆ. ಗಾಯಗೊಂಡ ಚಾಲಕನನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ಟ್ರಾಫಿಕ್ ಪೊಲೀಸರು ಸ್ಥಳಕ್ಕಾಗಮಿಸಿ ಸಂಚಾರಕ್ಕೆ ಅನುವುಮಾಡಿಕೊಟ್ಟರು.