ಕುಂದಾಪುರ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅನ್‌ಲೀಶ್ ದಿ ಬೆಸ್ಟ್ ಇನ್ ಯು’ಉಪನ್ಯಾಸ

Click Here

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣಾ ವಿಭಾಗದ ಸಂಯುಕ್ತ ಆಶ್ರಯದಲ್ಲಿ ’ಅನ್‌ಲೀಶ್ ದಿ ಬೆಸ್ಟ್ ಇನ್ ಯು’ ಎನ್ನುವ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.

Click Here

Call us

Click Here

ಮನೆಲ್ ಶ್ರೀನಿವಾಸ ನಾಯಕ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಮಂಗಳೂರಿನ ಸಹಾಯಕ ಪ್ರಾಧ್ಯಾಪಕ ಡಾ. ಶರಣ್ ಕುಮಾರ್ ಶೆಟ್ಟಿ ಮಾತನಾಡಿ, ಕೇಳುವ, ಮಾತನಾಡುವ, ಸಂಬಂಧವನ್ನು ಬೆಳೆಸಿಕೊಳ್ಳುವ ಅಭ್ಯಾಸದ ಮೂಲಕ ವಿದ್ಯಾರ್ಥಿಗಳು ತಮ್ಮ ಅಂತರ್ಯದಲ್ಲಿರುವ ಸಾಮರ್ಥ್ಯವನ್ನು ಹೊರತರಬಹುದೆಂದು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮನೆಲ್ ಶ್ರೀನಿವಾಸ ನಾಯಕ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಮಂಗಳೂರಿನ ನಿರ್ದೇಶಕ ಡಾ. ಮೊಲಿ ಚೌಧರಿ, ಕಾಲೇಜಿನ ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ವಾಣಿಜ್ಯ ಉಪನ್ಯಾಸಕರಾದ ಸತೀಶ್ ಶೆಟ್ಟಿ ಮತ್ತು ಧನಶ್ರೀ ಎಮ್. ಕಿಣಿ ಅತಿಥಿಗಳನ್ನು ಪರಿಚಯಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ಭಟ್ ಸ್ವಾಗತಿಸಿ, ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥೆ ನಂದಾ ರೈ ವಂದಿಸಿದರು. ವಾಣಿಜ್ಯ ಉಪನ್ಯಾಸಕಿ ಪ್ರಥ್ವಿಶ್ರೀ ಜಿ. ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

Leave a Reply