ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಇಲ್ಲಿನ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ದೇವರ ಕಾರ್ತಿಕ ದೀಪೋತ್ಸವ ಸರಳವಾಗಿ ಜರುಗಿತು
ಬೆಳಿಗ್ಗೆ ಪ್ರಾರ್ಥನೆಯೊಂದಿಗೆ ದೀಪೋತ್ಸವದ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿತು. ಧಾತ್ರಿ ಹವನ, ವನಭೋಜನ, ದೀಪೋತ್ಸವ, ಮಹಾಪೂಜೆ ಮತ್ತಿತರ ಧಾರ್ಮಿಕ ಅನುಷ್ಠಾನಗಳು ದೇವಳದ ಪ್ರಧಾನ ಅರ್ಚಕ ಎಸ್.ವೆಂಕಟರಮಣ ಆಚಾರ್ಯ ನೇತೃತ್ವದಲ್ಲಿ ಜರುಗಿತು
ದೇವಳದ ತಾಂತ್ರಿಕ ಜಿ.ವಸಂತ ಭಟ್, ದೇವಳದ ಆಡಳಿತ ಮೊಕ್ತೇಸರ ಎನ್.ಸದಾಶಿವ ನಾಯಕ್, ಆಡಳಿತ ಮಂಡಳಿ ಸದಸ್ಯರು, ಭಜಕರು ಮತ್ತಿತರರು ಉಪಸ್ಥಿತರಿದ್ದರು. ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಆಜ್ಞಾನುಸಾರ ದೀಪೋತ್ಸವವನ್ನು ರಥಬೀದಿ ವಠಾರದಲ್ಲಿ ಅತ್ಯಂತ ಸರಳವಾಗಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.