ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾನವ ಹಕ್ಕುಗಳ ಘಟಕದ ಆಶ್ರಯದಲ್ಲಿ ಆಯೋಜಿಸಿದ ಅಂತರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ನಡೆಯಿತು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರವೀಣ್ ಮೊಗವೀರ ಗಂಗೊಳ್ಳಿ ಮಾತನಾಡಿ, ಮಾನವ ಹಕ್ಕು ಪ್ರತಿಯೊಬ್ಬ ವ್ಯಕ್ತಿಯ ಜನ್ಮಸಿದ್ಧ ಹಕ್ಕು, ವ್ಯಕ್ತಿಯ ವ್ಯಕ್ತಿತ್ವದ ವಿಕಸನಕ್ಕೆ ಹಾಗೂ ಶೋಷಣೆ ರಹಿತ ಸಮಾಜವನ್ನು ರೂಪಿಸಲು ಮಾನವ ಹಕ್ಕುಗಳ ಅರಿವು ಪ್ರತಿಯೊಬ್ಬರಿಗೂ ಅತ್ಯವಶ್ಯಕ. ನಾವು ನಮ್ಮ ಹಕ್ಕುಗಳನ್ನು ಸದುಪಯೋಗ ಪಡಿಸಿಕೊಳ್ಳುವುದರ ಜೊತೆಗೆ ಇತರರ ಹಕ್ಕುಗಳನ್ನು ಗೌರವಿಸಬೇಕು ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಮಾನವ ಹಕ್ಕುಗಳ ಘಟಕದ ಸಂಯೋಜಕಿ ಅವಿತಾ ಕೊರೆಯಾ ಸ್ವಾಗತಿಸಿ, ನಿರೂಪಿಸಿದರು. ಸಹ ಸಂಯೋಜಕಿ ಡಾ.ದೀಪಾ ವಂದಿಸಿದರು.