ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ, ಕಾಲೇಜು ಬೋಧಕ-ಬೋಧಕೇತರ ಸಿಬ್ಬಂದಿ ಸಂಘದ ವಾರ್ಷಿಕ ಸಭೆ ನಡೆಯಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಮಾತನಾಡಿ, ಸಿಬ್ಬಂದಿ ವರ್ಗದವರು ಪರಸ್ಪರ ಅನ್ಯೋನ್ಯವಾಗಿರುವುದರ ಮೂಲಕ ಪ್ರತಿಯೊಬ್ಬರ ಸುಖ – ದುಃಖಗಳಲ್ಲಿ ಭಾಗಿಗಳಾಗಬೇಕು. ಸಹೋದ್ಯೋಗಿಗಳು ಮಾಡಿದ ಸಾಧನೆಯನ್ನು ಗುರುತಿಸುವುದರ ಜೊತೆಗೆ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರ ಮೂಲಕ ಮಾದರಿ ಸಂಘವಾಗಬೇಕು ಎಂದರು.
ಕಾಲೇಜಿನ ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಸಿದರು. ಬೋಧಕ-ಬೋಧಕೇತರ ಸಂಘದ ಕಾರ್ಯದರ್ಶಿ ಸತೀಶ್ ಕಾಂಚನ್ ಆನಗಳ್ಳಿ ವಾರ್ಷಿಕ ವರದಿ ವಾಚಿಸಿದರು. ಕಛೇರಿ ಮೇಲ್ವಿಚಾರಕಿ ಗಾಯತ್ರಿ ಶೇಟ್ ವಂದಿಸಿದರು. ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕಿ ವಿನಿತಾ ಎಸ್. ಗಾಣಿಗ ನಿರೂಪಿಸಿದರು. ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.










