ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲುವು ಖಚಿತ: ಸಂಸದ ಬಿ. ವೈ. ರಾಘವೇಂದ್ರ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬಿಜೆಪಿ ಪಕ್ಷ ಗ್ರಾಮ ಪಂಚಾಯತ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಪ್ರತಿ ಗ್ರಾಮದಲ್ಲಿಯೂ ಜನಸೇವೆಯಲ್ಲಿ ತೊಡಗಿಕೊಳ್ಳುವ ಅಭ್ಯರ್ಥಿಗಳು ಆಯ್ಕೆಯಾಗಬೇಕು ಎಂಬ ಆಶಯವನ್ನು ಹೊಂದಿದೆ ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದರು.

Call us

Click Here

ಸಿದ್ದಾಪುರ ಬಿಜೆಪಿ ಕಛೇರಿಯಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಗ್ರಾಮ ಪಂಚಾಯತ್ ಸದಸ್ಯರಿಗೆ ವಿಶೇಷ ಅಧಿಕಾರವಿದ್ದು, ಜನಸಾಮಾನ್ಯರಿಗೆ ನ್ಯಾಯ ಒದಗಿಸಲು ಅವರಿಗೆ ಹೆಚ್ಚಿನ ಅವಕಾಶವಿದೆ. ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಜವಾಬ್ದಾರಿ ಮತದಾರರಿದ್ದು, ಕೇಂದ್ರ, ರಾಜ್ಯ ಸರಕಾರಗಳ ಜನಪರ ಕಾರ್ಯಗಳು ಹಾಗೂ ಅದನ್ನು ಗ್ರಾಮಮಟ್ಟದ ತನಕ ತಲುಪಿಸುವ ಅಭ್ಯರ್ಥಿಯನ್ನೇ ಆಯ್ಕೆಮಾಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.

ರೈತರ ವೇಷತೊಟ್ಟು ಕೆಲವು ಹಿತಾಸಕ್ತಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರನಾಳಿಕೆಯಲ್ಲಿ ರೈತ ಮಸೂದೆಯ ಬಗ್ಗೆ ಹೇಳಿಕೊಂಡಿದ್ದ ಕಾಂಗ್ರೆಸ್ ಪಕ್ಷ ಇಂದು ವಿರೋಧ ವ್ಯಕ್ತಪಡಿಸುತ್ತಿದೆ. ಬಿಜೆಪಿ ಸರಕಾರ ಏಕಾಏಕಿ ರೈತ ಮಸೂದೆಯನ್ನು ಜಾರಿಗೆ ತಂದಿಲ್ಲ. ಬದಲಾಗಿ ಹಲವು ಹಂತಗಳಲ್ಲಿ ಚರ್ಚಿಸಿ, ರೈತರ ಆದಾಯ ದ್ವಿಗುಣಗೊಳ್ಳುವ ಖಾತ್ರಿಯಾದ ಬಳಿಕವಷ್ಟೇ ಮಸೂದೆ ಜಾರಿಗೆ ತಂದಿದೆ. ಇದು ನಿಜವಾಗಿಯೂ ರೈತರಿಗೆ ಅನುಕೂಲವಾಗಲಿದೆ ಎಂದರು.

ಮೃತ ಹದ್ದೂರು ರಾಜೀವ ಶೆಟ್ಟಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಸಂಸದರು, ಜನಾನುರಾಗಿಯಾಗಿ ಎಲ್ಲರಿಗೂ ಬೇಕಾಗಿದ್ದ ವ್ಯಕ್ತಿಯೂರ್ವರನ್ನು ಕಳೆದುಕೊಂಡಿರುವುದು ಬಿಜೆಪಿ ಪಕ್ಷಕ್ಕೆ ತುಂಬಲಾರದ ನಷ್ಟ ಎಂದರು.

Click here

Click here

Click here

Click Here

Call us

Call us

ಈ ಸಂದರ್ಭ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ, ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಬಿಜೆಪಿ ಪಕ್ಷದ ಪ್ರಮುಖರಾದ ಕಿರಣ್ ಕೊಡ್ಗಿ, ಜಯರಾಮ ಭಂಡಾರಿ, ರೋಹಿತ್ ಕುಮಾರ್ ಶೆಟ್ಟಿ, ಬಾಲಚಂದ್ರ ಭಟ್, ಶರತ್ ಕುಮಾರ್ ಶೆಟ್ಟಿ, ಮಹೇಶ್ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.

Leave a Reply