Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ರಿಸ್‌ಮಸ್, ಹೊಸ ವರ್ಷ ಆಚರಣೆಗೆ ಕೋವಿಡ್ ಮಾರ್ಗಸೂಚಿ ಪ್ರಕಟ
    Uncategorized

    ಕ್ರಿಸ್‌ಮಸ್, ಹೊಸ ವರ್ಷ ಆಚರಣೆಗೆ ಕೋವಿಡ್ ಮಾರ್ಗಸೂಚಿ ಪ್ರಕಟ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಕೋವಿಡ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕ್ರಿಸ್ ಮಸ್ ಮತ್ತು ಹೊಸವರ್ಷದ ಸಂಭ್ರಮಾಚರಣೆಯನ್ನು ಸರಳವಾಗಿ ಭಕ್ತಿಪೂರ್ವಕವಾಗಿ ಮತ್ತು ಅರ್ಥಗರ್ಭಿತವಾಗಿ ಆಚರಿಸುವ ಅವಶ್ಯಕತೆ ಇದ್ದು, ಈ ಸಂದರ್ಭದಲ್ಲಿ ರಾಜ್ಯಾದ್ಯಂತ ಸಾಮಾಜಿಕ ಅಂತರವಿಲ್ಲದೆ ಹೆಚ್ಚಿನ ಜನರು ಸೇರುವ ಸಾಮೂಹಿಕ ಕೂಟಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಹೆಚ್ಚು ಜನಸಂಖ್ಯೆಯುಳ್ಳ ವಸತಿ ಸಮುಚ್ಚಯಗಳಲ್ಲಿ ಹಾಗೂ ಜನ ಸೇರುವ ಸ್ಥಳಗಳಲ್ಲಿ ಆಯೋಜಿಸುವುದನ್ನು ನಿಷೇಧಿಸಿ, ಈ ಕೆಳಗಿನಂತೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ.

    Click Here

    Call us

    Click Here

    ಕ್ರೈಸ್ತ ಧರ್ಮದ ಚರ್ಚ್‌ಗಳಲ್ಲಿಒಮ್ಮೆಲೆ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಮೇಲ್ವಿಚಾರಕರು ಕಟ್ಟುನಿಟ್ಟಿನ ಕ್ರಮ ವಹಿಸಬೇಕು. ಹಬ್ಬದ ಆಚರಣೆಯ ಸಂದರ್ಭದಲ್ಲಿ ಸಾರ್ವಜನಿಕರ ಹಸ್ತಲಾಘವ ಮತ್ತು ಆಲಿಂಗನವನ್ನು ನಿಷೇಧಿಸಲಾಗಿದೆ. ಡಿಸೆಂಬರ್ 30ರಿಂದ ಜನವರಿ 2ರ ವರೆಗೆ ಕ್ಲಬ್ / ಪಬ್/ ರೆಸ್ಟೋರೆಂಟ್ ಹಾಗೂ ಅದೇ ತೆರನಾದ ಪ್ರದೇಶಗಳಲ್ಲಿ ಸಾಮಾಜಿಕ ಅಂತರವಿಲ್ಲದೇ ಹೆಚ್ಚು ಜನರು ಸೇರುವ ವಿಶೇಷ ಯೋಜಿತ ಒಟ್ಟುಗೂಡುವಿಕೆ, ವಿಶೇಷ ಡಿಜೆ-ಡಾನ್ಸ್ ಕಾರ್ಯಕ್ರಮ, ವಿಶೇಷ ಪಾರ್ಟಿ ಇತ್ಯಾದಿಗಳನ್ನು ನಿಷೇಧಿಸಲಾಗಿದ್ದು, ಕ್ಲಬ್ / ಪಬ್/ ರೆಸ್ಟೋರೆಂಟ್‌ಗಳನ್ನು ಪ್ರತಿನಿತ್ಯದಂತೆ ತೆರೆದಿದ್ದು, ನಡೆಸಲು ನಿರ್ಬಂಧವಿಲ್ಲ.

    ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳ, ಮುಖ್ಯ ರಸ್ತೆಗಳಲ್ಲಿ ಸಾಮಾಜಿಕ ಅಂತರವಿಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿ ಜನರ ಸೇರುವಿಕೆಯನ್ನು ಹಾಗೂ ಸಂಭ್ರಮಾಚರಣೆಯನ್ನು ನಿಷೇಧಿಸಲಾಗಿದ್ದು, ಈ ಸ್ಥಳಗಳಲ್ಲಿ ಪ್ರತಿನಿತ್ಯದ ಸಾಮಾನ್ಯ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳಲು ನಿರ್ಬಂಧವಿಲ್ಲ. ಆಯ್ದ ರಸ್ತೆ ಸ್ಥಳಗಳಿಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿಗಳು ಹೆಚ್ಚಿನ ನಿರ್ಬಂಧಗಳನ್ನು ವಿಧಿಸಬಹುದು. ಸರ್ಕಾರದ ಆದೇಶದಂತೆ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಅದರಂತೆ 65 ವರ್ಷ ಮೇಲ್ಪಟ್ಟ ಹಿರಿಯರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಇರಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಮತ್ತು ಹೋಟೆಲ್/ ಮಾಲ್ / ಪಬ್/ ರೆಸ್ಟೋರೆಂಟ್‌ಗಳಲ್ಲಿ ಥರ್ಮಲ್ ಸ್ಕ್ಯಾನಿಂಗ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಇರಿಸಬೇಕು.

    ಹೋಟೆಲ್/ ಮಾಲ್ / ಪಬ್/ ರೆಸ್ಟೋರೆಂಟ್‌ಗಳ ಮಾಲೀಕರು, ಕಡ್ಡಾಯವಾಗಿ ಸರ್ಕಾರದ ಆದೇಶದಂತೆ ಕೋವಿಡ್-19 ರ ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ಜನ ಸೇರುವಂತೆ ಜಾಗ್ರತೆ ವಹಿಸಬೇಕು. ಅಗತ್ಯವಿದ್ದಲ್ಲಿ ಜನರನ್ನು ಸರದಿಯಲ್ಲಿ ಪ್ರವೇಶಿಸಲು ಅಥವಾ ಆನ್‌ಲೈನ್ ಮುಖಾಂತರ / ಟೋಕನ್ ಪದ್ಧತಿಯಲ್ಲಿ ಸ್ಥಳ ಕಾಯ್ದಿರಿಸಲು ವ್ಯವಸ್ಥೆ ಕಲ್ಪಿಸಬೇಕು. ಪ್ರಾಂಗಣದಲ್ಲಿ, ಉಪಹಾರ ಸ್ಥಳಗಳಲ್ಲಿ, ವ್ಯವಸ್ಥಿತ ಕಟ್ಟಡ ಸಮುಚ್ಚಯಗಳಲ್ಲಿ ಜನರು ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ವ್ಯವಸ್ಥೆ ಕಲ್ಪಿಸಬೇಕು.

    ಸರ್ಕಾರದ ಮಾರ್ಗಸೂಚಿಯಂತೆ ಕಡ್ಡಾಯವಾಗಿ ಹಸಿರು ಪಟಾಕಿಗಳನ್ನು ಮಾತ್ರ ಹಚ್ಚಬೇಕು. ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ಸಂಬಂಧಪಟ್ಟ ಪ್ರಾಧಿಕಾರಗಳು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸಬೇಕು. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆ / ಕಾರ್ಪೋರೇಷನ್ / ಪ್ರಾಧಿಕಾರಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

    Click here

    Click here

    Click here

    Click Here

    Call us

    Call us

    ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ / ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ರ ಅಡಿಯಲ್ಲಿ ಶಿಸ್ತಿನ / ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಐಸಿಎಸ್‌ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಶಾಲೆಗೆ ದಾಖಲೆಯ ಫಲಿತಾಂಶ

    02/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026
    Leave A Reply Cancel Reply

    5 × two =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.