ಬೈಂದೂರು ತಾಲೂಕಿನ ವಿವಿಧೆಡೆ ಶಾಂತಿಯುತ ಮತದಾನ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬೈಂದೂರು ತಾಲೂಕಿನ 15 ಗ್ರಾಮ ಪಂಚಾಯತಿಗಳಿಗೆ ನಡೆಯುತ್ತಿರುವ ಚುನಾವಣೆ 128 ಮತಗಟ್ಟೆಗಳಲ್ಲಿ ಸುಗಮವಾಗಿ ನಡೆಯುತ್ತಿದ್ದು, ಪೇಟೆಗಿಂತ ಗ್ರಾಮೀಣ ಪ್ರದೇಶಗಳಲ್ಲಿಯೇ ಹೆಚ್ಚಿನ ಮತದಾನ ನಡೆಯುತ್ತಿರುವುದು ಕಂಡುಬಂತು. ಹಿರಿಯ ನಾಗರಿಕರು, ವಿಕಲಚೇತನರು ಹೆಚ್ಚು ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದು, ಮಧ್ಯಾಹ್ನ 3 ಗಂಟೆಯ ತನಕ ಒಟ್ಟು ಶೇ57.18 ರಷ್ಟು ಮತದಾನವಾಗಿದೆ.

Call us

Click Here

ಬೈಂದೂರು ತಾಲೂಕಿನಲ್ಲಿ ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯ ತನಕ ಶೇ.11.49 ಮತದಾನವಾಗಿದ್ದರೇ, 11 ಗಂಟೆಯ ತನಕ ಶೇ. 28.49, ಮಧ್ಯಾಹ್ನ 1 ಗಂಟೆಯ ತನಕ ಶೇ.46.53 ಹಾಗೂ 3 ಗಂಟೆಯ ಒಟ್ಟು ಶೇ.57.18 ಮತದಾನವಾಗಿದೆ.

ಮತ ಕೇಂದ್ರಗಳಲ್ಲಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲನೆ ಮಾಡಲಾಗುತ್ತಿದ್ದು, ಮತದಾನಕ್ಕೂ ಮುನ್ನ ಸ್ಯಾನಿಟೈಜ್, ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯವಾಗಿದೆ. ಎಸ್ಪಿ, ಡಿವೈಎಸ್ಪಿ, ಸಿಪಿಐ ನೇತೃತ್ವದಲ್ಲಿ ಮತದಾನ ಕೇಂದ್ರಗಳಲ್ಲಿ ಬಂದೋವಸ್ತ್ ಏರ್ಪಡಿಸಲಾಗಿದೆ.

Leave a Reply