ಮನೆಗಳಿಗೆ ಗೋಮಾಂಸ ಮಾರಾಟ ಮಾಡುತ್ತಿದ್ದವನ ಬಂಧನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಮನೆಗಳಿಗೆ ತೆರಳಿ ಗೋ ಮಾಂಸವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನುಗಂಗೊಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಗಂಗೊಳ್ಳಿ ನಿವಾಸಿ ಅಬ್ದುಲ್ ರಹೀಂ (30) ಬಂಧಿತ ಆರೋಪಿ.

Call us

Click Here

ಗಂಗೊಳ್ಳಿ ಠಾಣಾ ಪಿಎಸ್ಐ ಭೀಮಾಶಂಕರ್ ಅವರು ಹೆಡ್ ಕಾನ್ಸ್ಟೇಬಲ್ ಗಿರೀಶ್ ಅವರೊಂದಿಗೆ ಗಂಗೊಳ್ಳಿ ಪೇಟೆಯಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ಗಂಗೊಳ್ಳಿ ಮೀನು ಮಾರ್ಕೆಟ್ ಸಮೀಪ ಅಬ್ದುಲ್ ರಹೀಂ ಎಂಬಾತ ದನದ ಮಾಂಸವನ್ನು ಮನೆ ಮನೆಗೆ ತೆರಳಿ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದಿದ್ದು, ಅದರಂತೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಆರೋಪಿ ಪ್ಲಾಸ್ಟಿಕ್ ತೊಟ್ಟೆಯಲ್ಲಿ ಅಕ್ರಮವಾಗಿ 4 ಕೆ.ಜಿ ದನದ ಮಾಂಸವನ್ನು ತೆಗೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಪೊಲೀಸರು ಆರೋಪಿ ಹಾಗೂ ಮಾಂಸವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave a Reply