ಕುಂದಾಪುರ: ಅಪ್ರಾಪ್ತೆಯ ವಿವಾಹ ತಡೆದ ಅಧಿಕಾರಿಗಳು

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಲ್ಲೂರು ಗುಡ್ಡೆಯಂಗಡಿಯ 17 ವರ್ಷದ ಬಾಲಕಿಗೆ 28 ವರ್ಷದ ಹುಡುಗನೊಂದಿಗೆ ತ್ರಾಸಿ ಮಹಾಗಣಪತಿ ಸಭಾಭವನದಲ್ಲಿ ಮದುವೆ ಮಾಡಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿತ್ತು.

Call us

Click Here

ಈ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುಂದಾಪುರ, ಪೊಲೀಸ್ ಇಲಾಖೆ ಗಂಗೊಳ್ಳಿ, ಗ್ರಾಮ ಪಂಚಾಯತ್ ತ್ರಾಸಿಯ ಅಧಿಕಾರಿಗಳ ತಂಡ ಸುಮಾರು 200 ಮಂದಿ ಸೇರಿದ್ದ ಮದುವೆ ಹಾಲಿಗೆ ಹಠಾತ್ ಭೇಟಿ ನೀಡಿ ಬಾಲ್ಯವಿವಾಹವನ್ನು ತಡೆದಿದ್ದಾರೆ.

ಈ ಸಂದರ್ಭ ಎರಡೂ ಕುಟುಂಬದವರೊಂದಿಗೆ ಮಾತುಕತೆ ನಡೆಸಿ ಬಾಲ್ಯವಿಹಾಹ ನಿಷೇದ ಮತ್ತು ತಡೆಗಟ್ಟುವಿಕೆ ಕಾಯ್ದೆ ಬಗ್ಗೆ ಅರಿವು ಮೂಡಿಸಿದರು. ಕುಟುಂಬಿಕರಿಂದ ಮತ್ತು ಹಾಲ್ ಮಾಲಿಕರು ಮತ್ತು ಪುರೋಹಿತರಿನಿಂದ ಮುಚ್ಚಳಿಕೆ ಬರೆಸಿಕೊಳ್ಳಲಾಯಿತು. ಮದುವೆಗೆ ಬಂದವರೆನ್ನೆಲ್ಲಾ ವಾಪಸು ಮನೆಗೆ ಕಳುಹಿಸಿ ಕೊಡಲಾಯಿತು.

ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿಯ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಕುಂದಾಪುರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೋಭಾ ಶೆಟ್ಟಿ, ಕುಂದಾಪುರ ಅಂಗನವಾಡಿ ಮೇಲ್ವಿಚಾರಕಿ ಪ್ರಭಾವತಿ, ರಕ್ಷಣಾಧಿಕಾರಿ ಕಪಿಲ, ಸಮಾಜ ಕಾರ್ಯಕರ್ತೆ ಸುರಕ್ಷಾ, ಸಹಾಯಕ ಉಪನಿರೀಕ್ಷಕ ರಘುರಾಮ, ಹೆಡ್ ಕಾನ್ಸ್ಟೇಬಲ್ ಮೋಹನ್ ಪೂಜಾರಿ, ಮಾಹಿಳಾ ಪೊಲೀಸ್ ರೂಪ, ಶೋಭಾ ಎಸ್, ತ್ರಾಸಿ ಗ್ರಾಮ ಪಂಚಾಯತ್ ಪಿ .ಡಿ .ಓ .ಶಿವಾನಂದ, ಅಕೌಂಟಂಟ್ ಸಂದೀಪ್, ಅಂಗನವಾಡಿ ಕಾರ್ಯಕರ್ತೆ ಜಯಮಾಲಾ ಭಾಗವಹಿಸಿದ್ದರು.

Click here

Click here

Click here

Click Here

Call us

Call us

Leave a Reply