ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಮರವಂತೆ ಶಾಲೆ ಮುಖ್ಯೋಪಾಧ್ಯಾಯ ಸತ್ಯನಾ ಕೊಡೇರಿ ಅವರಿಗೆ ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪ್ರಾಥಮಿಕ, ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘ ಉಡುಪಿ ಜಿಲ್ಲೆ. ಇದರ ಆಶ್ರಯದಲ್ಲಿಉಡುಪಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾವಿತ್ರಿಭಾಯಿ ಫುಲೆ ಸಾಧಕ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸತ್ಯನಾ ಕೊಡೇರಿ ಅವರು ಶೈಕ್ಷಣಿಕ ಚಿಂತಕ, ವಾಗ್ಮಿ, ಸಾಹಿತಿ, ವಿಮರ್ಶಕ, ನಾಟಕ ನಿರ್ದೇಶಕ, ಚಿತ್ರಗಾರ, ಹಾಡುಗಾರ ಹೀಗೆ ಎಲ್ಲಾ ರಂಗಗಳಲ್ಲೂ ಸ್ರಜನಶೀಲ ವ್ಯಕ್ತಿಯಾಗಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ, ಗುರುತಿಸಿಕೊಂಡಿದ್ದು ಪ್ರಸ್ತುತ ಮರವಂತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.