ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗ್ರಾಮ ಪಂಚಾಯಿತಿ ಮತ್ತು ರೋಟರಿ ಕ್ಲಬ್ ಆಶ್ರಯದಲ್ಲಿ ‘ಮಕ್ಕಳಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನದ ಅಂಗವಾಗಿ ಈಚೆಗೆ ಜರುಗಿದ ‘ಓದುವ ಬೆಳಕು’ ಕಾರ್ಯಕ್ರಮಕ್ಕೆ ಚಾಲನೆ ನಿಡಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ ಗ್ರಾಮ ಪಂಚಾಯಿತಿಯನ್ನು ಮಕ್ಕಳ ಸ್ನೇಹಿಯಾಗಿ ಮಾಡಲು ಪ್ರಯತ್ನಿಸಲಾಗುವುದು ಹೇಳಿದರು.
ಪಂಚಾಯಿತಿ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಸದಸ್ಯರು, ಕಾರ್ಯದರ್ಶಿ ದಿನೇಶ ಶೇರುಗಾರ್, ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಬಿ. ಲಕ್ಷ್ಮೀಕಾಂತ ಮಡಿವಾಳ, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಉಪಾಧ್ಯಕ್ಷೆ ತಿಲೋತ್ತಮಾ ನಾಯಕ್, ಊರಿನ ಶಾಲೆಗಳ ಮುಖ್ಯಶಿಕ್ಷಕರು, ಶಿಕ್ಷಕರು ಉಪಸ್ಥಿತರಿದ್ದರು.
ನಿಶಾ ಪೂಜಾರಿ ನಿರೂಪಿಸಿದರು. ವಿದ್ಯಾರ್ಥಿ ಶ್ರೀಶ ಖಾರ್ವಿ ಸ್ವಾಗತಿಸಿದರು. ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ ಪ್ರಾಸ್ತಾವಿಕ ಮಾತುಗಳನ್ನಾಡಿದರು. ತನುಶ್ರೀ ಖಾರ್ವಿ ವಂದಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.