ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕ.ರಾ.ರ.ಸಾ.ನಿಗಮದ ವತಿಯಿಂದ ಮಂಗಳೂರಿನಿಂದ ಕುಮಟ ಮಾರ್ಗದಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವೋಲ್ವೋ ಸಾರಿಗೆ ಸೌಲಭ್ಯವನ್ನು ಜನವರಿ 4 ರಿಂದ ಪ್ರಾರಂಭಿಸಲಾಗಿದೆ.
ಮಂಗಳೂರಿನಿಂದ ಸಂಜೆ 5 ಗಂಟೆಗೆ ಹೊರಟು ಉಡುಪಿ, ಕುಂದಾಪುರ, ಬೈಂದೂರು, ಭಟ್ಕಳ, ಹೊನ್ನಾವರ ಮಾರ್ಗವಾಗಿ ರಾತ್ರಿ 9.30 ಕ್ಕೆ ಕುಮಟಾ ತಲುಪಲಿದೆ.
ಕುಮಟಾದಿಂದ ಮುಂಜಾನೆ 5.30 ಕ್ಕೆ ಹೊರಟು ಹೊನ್ನಾವರ, ಭಟ್ಕಳ, ಬೈಂದೂರು, ಕುಂದಾಪುರ, ಉಡುಪಿ ಮಾರ್ಗವಾಗಿ ಬೆಳಗ್ಗೆ 9.30 ಕ್ಕೆ ಮಂಗಳೂರು ತಲುಪಲಿದೆ.
ನಿಗಮದ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಆರೋಗ್ಯದ ಹಿತದೃಷ್ಟಿಯಿಂದಾಗಿ ನಿಗಮದ ಎಸ್‌ಒಪಿರಲ್ಲಿಯ ನಿರ್ದೇಶನಗಳಂತೆ ನಿಗಮದ ವಾಹನಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮಂಗಳೂರು ಕರಾರಸಾಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.