Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಕ್ಕಿ ಜ್ವರ ಭಯ ಬೇಡ, ಎಚ್ಚರವಿರಲಿ: ಜಿಲ್ಲಾಧಿಕಾರಿ ಜಿ. ಜಗದೀಶ್
    ಉಡುಪಿ ಜಿಲ್ಲೆ

    ಹಕ್ಕಿ ಜ್ವರ ಭಯ ಬೇಡ, ಎಚ್ಚರವಿರಲಿ: ಜಿಲ್ಲಾಧಿಕಾರಿ ಜಿ. ಜಗದೀಶ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಜಿಲ್ಲೆಯಲ್ಲಿ ಯಾವುದೇ ರೀತಿಯ ಪಕ್ಷಿಗಳಲ್ಲಿ ಇದುವರೆಗೆ ಹಕ್ಕಿಜ್ವರದ ಸೋಂಕು ಕಂಡು ಬಂದಿರುವುದಿಲ್ಲ. ಆದ್ದರಿಂದ ಸಾರ್ವಜನಿಕರು ಹಕ್ಕಿಜ್ವರದ ಕುರಿತು ಆತಂಕ ಪಡುವ ಅಗತ್ಯವಿಲ್ಲ. ಆದರೆ ಹಕ್ಕಿ ಜ್ವರ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.

    Click Here

    Call us

    Click Here

    ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಕ್ಕಿ ಜ್ವರದ ಕುರಿತು ನಡೆದ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಸಭೆಯಲ್ಲಿ ಮಾತನಾಡಿದರು.

    ಹಕ್ಕಿ ಜ್ವರವು ಕೇರಳ, ಗುಜರಾತ್ ಮುಂತಾದ ರಾಜ್ಯಗಳಲ್ಲಿ ಕಂಡುಬಂದಿದೆ ಎಂದು ವರದಿಯಾದ ಹಿನ್ನಲೆಯಲ್ಲಿ ಸಾರ್ವಜನಿಕರು ಹೆಚ್ಚಿನ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳಬೇಕು. ಪಶುಪಾಲನೆ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಜಿಲ್ಲೆಯ ಎಲ್ಲಾ ಕೋಳಿ ಫಾರಂಗಳಿಗೆ ಭೇಟಿ ನೀಡಿ ಕೋಳಿಗಳ ಆರೋಗ್ಯದ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಡಿಸಿ ಸೂಚಿಸಿದರು.

    ಹಕ್ಕಿ ಜ್ವರವು ವೈರಾಣುವಿನಿಂದ ಕಾಣಿಸಿಕೊಳ್ಳಲಿದ್ದು, ಈ ಸೋಂಕುಗಳಿಗೆ ಮಕ್ಕಳು ಹಾಗೂ ವಯಸ್ಕರು ಹೆಚ್ಚಾಗಿ ಒಳಗಾಗುತ್ತಾರೆ. ಸೋಂಕಿನಿಂದ ಜ್ವರ, ಶೀತ, ತಲೆನೋವು, ಮೈಕೈನೋವು, ಗಂಟಲು ನೋವು, ಕೆಮ್ಮು, ಉಸಿರಾಟದ ತೊಂದರೆಗಳು ಕಂಡು ಬರುತ್ತದೆ. ಕೋಳಿ ಮಾಂಸ ಮತ್ತು ಮೊಟ್ಟೆಗಳನ್ನು

    ಉಪಯೋಗಿಸುವ ಮೊದಲು ಚೆನ್ನಾಗಿ ಬೇಯಿಸಿ ತಿನ್ನಬೇಕು. ರೋಗ ಹರಡುವುದನ್ನು ತಡೆಯಲು ಸಾಮಾಜಿಕ ಅಂತರ, ಸ್ಯಾನಿಟೈಸ್, ಮಾಸ್ಕ್ ಬಳಕೆ ಅಗತ್ಯ ಎಂದರು. ಪಶುಪಾಲನಾ ಇಲಾಖೆಯ ಅಧಿಕಾರಿಗಳು ಪ್ರತಿದಿನ ಕೋಳಿ ಫಾರಂಗಳಲ್ಲಿನ ಕೋಳಿಗಳ ಸ್ಯಾಂಪಲ್‌ಗಳನ್ನು ತೆಗೆದುಕೊಂಡು ಅದನ್ನು

    Click here

    Click here

    Click here

    Click Here

    Call us

    Call us

    ಬೆಂಗಳೂರಿನ ತಪಾಸಣಾ ಕೇಂದ್ರಕ್ಕೆ ಕಳುಹಿಸಿ, ಅದರ ತಪಾಸಣಾ ಫಲಿತಾಂಶದ ಮೇಲೆ ಮುಂದಿನ ಕ್ರಮಗಳನ್ನು ಕೈಗೊಳ್ಳಬೇಕು. ಅರಣ್ಯ ವ್ಯಾಪ್ತಿಯಲ್ಲಿ ಪಕ್ಷಿಗಳ ಸಾವು ಸಂಭವಿಸಿದ್ದಲ್ಲಿ ಅರಣ್ಯ ಇಲಾಖಾಧಿಕಾರಿಗಳು ಕೂಡಲೇ ಮಾಹಿತಿ ನೀಡಬೇಕು. ಎಲ್ಲಾ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಹಕ್ಕಿಜ್ವರದ ಕುರಿತು ಕರಪತ್ರ ವಿತರಣೆ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಡಿಸಿ ಸೂಚಿಸಿದರು.

    ಸಾರ್ವಜನಿಕರು ಹಕ್ಕಿಜ್ವರ ಕುರಿತು ಸೋಷಿಯಲ್ ಮೀಡಿಯಾಗಳಲ್ಲಿ ಬರುವ ಸುದ್ದಿಗಳನ್ನು ನಂಬದಂತೆ ತಿಳಿಸಿದ ಜಿಲ್ಲಾಧಿಕಾರಿ, ಜಿಲ್ಲೆಗೆ ಹೊರರಾಜ್ಯದಿಂದ ಕೋಳಿಗಳ ಸಾಗಾಟ ಬರುವುದಿಲ್ಲ. ಆದ್ದರಿಂದ ಕೋಳಿಮಾಂಸ ಸೇವನೆಗೆ ಯಾವುದೇ ಸಮಸ್ಯೆಯಿಲ್ಲ. ಜಿಲ್ಲೆಯಿಂದ ಬೇರೆ ರಾಜ್ಯಗಳಿಗೆ ಕೋಳಿಗಳನ್ನು ಸರಬರಾಜು ಮಾಡಿ ಬರುವ, ಖಾಲಿ ವಾಹನಗಳನ್ನು ಸ್ಯಾನಿಟೈಸ್ ಮಾಡಿ, ಚಾಲಕ-ಸಿಬ್ಬಂದಿಗಳ ಆರೋಗ್ಯ ತಪಾಸಣೆ ಮಾಡಬೇಕು. ಅಂತರ್ ಜಿಲ್ಲಾ ಕೋಳಿ ಸಾಗಾಣಿಕೆಗೆ ಯಾವುದೇ ನಿರ್ಬಂಧವಿಲ್ಲ ಎಂದು ಜಿ.ಜಗದೀಶ್ ತಿಳಿಸಿದರು.

    ಮನೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ಅನುಮಾನಾಸ್ಪದವಾಗಿ ಸತ್ತ ಪಕ್ಷಿ, ಪ್ರಾಣಿಗಳು ಕಂಡು ಬಂದರೆ, ಜಿಲ್ಲಾ ಕಂಟ್ರೋಲ್ ರೂಮ್ ನಂಬರ್ 0820-2534024 ತಕ್ಷಣ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದರು.

    ಸಭೆಯಲ್ಲಿ ಡಿಹೆಚ್‌ಓ ಡಾ.ಸುಧೀರ್ ಚಂದ್ರ ಸೂಡಾ, ಜಿಲ್ಲಾ ಸರ್ವೆಕ್ಷಣಾದಿಕಾರಿ ಡಾ. ವಾಸುದೇವ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ. ಹರೀಶ್ ತಮನಕರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    seventeen + 7 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.