ಕೋಟೇಶ್ವರ: ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿ ಜಿಲ್ಲೆಯಲ್ಲಿCOTPA 2003 ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಕುಂದಾಪುರ ತಾಲೂಕಿನ ಕೋಟೇಶ್ವರ ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿಗಳಿಗೆ ದಾಳಿ ನಡೆಸಿ ಸೆಕ್ಷನ್ 4, 6 (ಎ) ಮತ್ತು 6(ಬಿ) ಅಡಿಯಲ್ಲಿ 17 ಪ್ರಕರಣ ದಾಖಲಿಸಿ ರೂ. 1700/- ದಂಡ ವಸೂಲಿ ಮಾಡಲಾಯಿತು. ಅದರಂತೆ ಸೆಕ್ಷನ್ 4, 6 (ಎ) ಮತ್ತು 6(ಬಿ) ನಾಮಫಲಕಗಳನ್ನು ಸದರಿ ದಾಳಿಯಲ್ಲಿ ವಿತರಿಸಲಾಯಿತು.

Call us

Click Here

ದಾಳಿಯಲ್ಲಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ್, ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ, ಕೋಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಉಮೇಶ್ ನಾಯಕ್, ಕುಂದಾಪುರ ತಾಲೂಕು ಕಾರ್ಮಿಕ ನಿರೀಕ್ಷಕ ಪ್ರಸನ್ನ, ಹಿರಿಯ ಆರೋಗ್ಯಸಹಾಯಕ ರಮೇಶ್ ಶೆಟ್ಟಿ, ಕುಂದಾಪುರ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ದತ್ತಾತ್ರೇಯ, ಜಿಲ್ಲಾ ರಾಷ್ಟೀಯ ತಂಬಾಕು ನಿಯಂತ್ರಣಾ ಘಟಕದ ವತಿಯಿಂದ, ಎನ್.ಟಿ.ಸಿ.ಪಿ. ಜಿಲ್ಲಾ ಸಲಹೆಗಾರ್ತಿ ಮಂಜುಳಾ ಶೆಟ್ಟಿ, ಸಮಾಜಕಾರ್ಯಕರ್ತೆ ಶೈಲಾ ಶಾಮನೂರು, ಕುಂದಾಪುರ ಪೊಲೀಸ್ ಠಾಣೆಯ ಆರಕ್ಷಕರಾದ ರಾಘವೇಂದ್ರ ಮತ್ತು ರಂಜಿತ್ ಉಪಸ್ಥಿತರಿದ್ದರು.

Leave a Reply