ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಖಾಸಗಿ ವಾಣಿಜ್ಯ ವಾಹನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳಿಗೆ ಅನ್ವಯಿಸಿವಂತೆ “ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ” ಪರಿಷ್ಕೃತ ಯೋಜನೆಯನ್ನು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ಜಾರಿಗೊಳಿಸಲಾಗಿರುತ್ತದೆ.
ಸಂಬಂಧಪಟ್ಟ ಅಸಂಘಟಿತ ವಲಯದ ಚಾಲಕರು, ನಿರ್ವಾಹಕರು ಮತ್ತು ಕ್ಲೀನರ್‌ಗಳು, ಕಾರ್ಮಿಕ ಅಧಿಕಾರಿಗಳ ಕಛೇರಿ, ಉಡುಪಿ ಉಪ ವಿಭಾಗ, ‘ಎ’ ಬ್ಲಾಕ್, ಮೊದಲನೇ ಮಹಡಿ, ಕೊಠಡಿ ಸಂಖ್ಯೆ:201, ರಜತಾದ್ರಿ, ಮಣಿಪಾಲ, ಉಡುಪಿ ಇಲ್ಲಿ ನೋಂದಾಯಿಸಿಂಕೊಡು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಉಡುಪಿ ಉಪವಿಭಾಗದ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.