ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೈಂದೂರು ವಲಯ ಇವರ ಆಶ್ರಯದಲ್ಲಿ ವಲಯದ ಶಿಕ್ಷಕರ ಗುರುಸ್ಪಂದನ ಕಾರ್ಯಕ್ರಮವು ಇಲ್ಲಿನ ಸ.ಮಾ.ಹಿ.ಪ್ರಾ.ಶಾಲೆಯಲ್ಲಿ ಚಾಲನೆ ನೀಡಲಾಯಿತು.
ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜಿ.ಎಂ.ಮುಂದಿನಮನಿ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕರ ಸಂಘದ ಅಧ್ಯಕ್ಷರಾದ ಶೇಖರ್ ಪೂಜಾರಿ ವಹಿಸಿ ಮಾತನಾಡಿ,, ಇಲಾಖೆಯ ಸಮನ್ವಯದೊಂದಿಗೆ ಶಿಕ್ಷಕ ಸ್ನೇಹಿ ವಾತಾವರಣ ನಿರ್ಮಾಣ ಮಾಡಲು ಶಿಕ್ಷಕ ಬಂಧುಗಳ ಸಹಕಾರ ಅಗತ್ಯ ಎಂದು ಹೇಳಿದರು.
ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಜನಾರ್ದನ ದೇವಾಡಿಗ ಪ್ರಾಸ್ತಾವಿಕವಾಗಿ ಮಾತನಾಡಿ ಶಿಕ್ಷಕರು ತಮ್ಮ ಸೇವಾ ಪುಸ್ತಕ ದಲ್ಲಿ ಗಮನಿಸಬೇಕಾದ ಅಂಶಗಳ ಬಗ್ಗೆ ಸ್ಪಷ್ಟ ಪಡಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶಾಲೆಯ ಎಸ್.ಡಿ.ಎಮ್.ಸಿ. ಅಧ್ಯಕ್ಷರಾದ ರವೀಂದ್ರ ಶ್ಯಾನುಭಾಗ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಮೇನೇಜರ್ ಎಡ್ವಿನ್ ಫೆರ್ನಾಂಡಿಸ್ ಶುಭ ಕೋರಿದರು.
ಕಾರ್ಯಕ್ರಮದಲ್ಲಿ ಧ.ಮಂ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕರಾದ ರಾಜು ಮಯ್ಯಾಡಿ, ಬೈಂದೂರು ಶಿಕ್ಷಣ ಸಂಯೋಜಕ ಚಂದ್ರ ದೇವಾಡಿಗ, ಸಿ.ಆರ್.ಪಿ.ಗಳಾದ ರಾಘವೇಂದ್ರ ಡಿ, ದಿನಕರ, ವಿಶ್ವನಾಥ ಮೇಸ್ತ, ರಾಮನಾಥ ಮೇಸ್ತ ಹಾಗೂ ಶಿಕ್ಷಕ ಸಂಘದ ಪ್ರತಿನಿಧಿಗಳಾದ ನಾಗರತ್ನ ಎಸ್, ಸಹಕಾರ್ಯದರ್ಶಿಗಳಾದ ನಾಗರತ್ನ ಬಿ. ಮಂಜುನಾಥ ದೇವಾಡಿಗ, ಸಂಘಟನಾ ಕಾರ್ಯದರ್ಶಿಗಳಾದ ಮಲ್ಲಿಕಾ ಬಿ ಶೆಟ್ಟಿ, ಮತ್ತು ಸುಬ್ರಹ್ಮಣ್ಯ ಜಿ. ಉಪ್ಪುಂದ, ನಾಮನಿರ್ದೇಶಿತ ಸದಸ್ಯರಾದ ರವಿ ಶೆಟ್ಟಿ .ಶಿಕ್ಷಣಾಧಿಕಾರಿಗಳ ಕಚೇರಿಯ ಸಿಬ್ಬಂದಿ ವರ್ಗದವರು. ಉಪಸ್ಥಿತರಿದ್ದರು.
ಶಿಕ್ಷಕ ಸಂಘದ ಕಾರ್ಯದರ್ಶಿ ಗಣಪತಿ ಹೋಬಳಿದಾರ್ ಕಾರ್ಯಕ್ರಮ ಸಂಯೋಜಿಸಿ ನಿರೂಪಿಸಿದರು. ಶಾಲೆಯ ಶಿಕ್ಷಕಿಯರ ವೃಂದ ಪ್ರಾರ್ಥನೆ ನೆರವೇರಿಸಿದರು. ಖಜಾಂಚಿ ಅಚ್ಯುತ ಬಿಲ್ಲವ ಸ್ವಾಗತಿಸಿ, ಉಪಾಧ್ಯಕ್ಷರಾದ ಸುನಿಲ್ ಕುಮಾರ್ ಶೆಟ್ಟಿ ವಂದಿಸಿದರು.