ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ ವಿತರಣೆ: ಅರ್ಜಿ ಆಹ್ವಾನ

Click Here

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಂಧ ವಿದ್ಯಾರ್ಥಿಗಳು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಸ್ವಾವಲಂಬಿಗಳಾಗಲು ಟಾಕಿಂಗ್ ಮೊಬೈಲ್, ಬ್ರೈಲ್ ವಾಚ್, ವಾಕಿಂಗ್ ಸ್ಟಿಕ್ ಮತ್ತು ಇನ್ನಿತರ ಸಾಧನಗಳನ್ನು ಒಳಗೊಂಡ ತಲಾ 25,000 ರೂ.ಗಳ ಬ್ರೈಲ್ ಕಿಟ್‌ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

Click Here

Call us

Click Here

ಅಂಧ ವಿದ್ಯಾರ್ಥಿಗಳ ವಿಕಲತೆಯ ಪ್ರಮಾಣ ಶೇ.40 ಅಥವಾ ಅದಕ್ಕಿಂತ ಹೆಚ್ಚಾಗಿರುವ, ಎಸ್.ಎಸ್.ಎಲ್.ಸಿ ಹಾಗೂ ನಂತರದ ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವ, ರಾಜ್ಯದಲ್ಲಿ ಕನಿಷ್ಠ 10 ವರ್ಷಗಳ ನಿವಾಸಿಯಾಗಿರುವವರು, ಸಂಬಂಧಪಟ್ಟ ಶಾಲಾ ಕಾಲೇಜುಗಳ ಮುಖ್ಯಸ್ಥರಿಂದ ಶಿಕ್ಷಣ ಪಡೆಯುತ್ತಿರುವ ಬಗ್ಗೆ ದೃಢೀಕರಣ ಒದಗಿಸಬೇಕು.

ಅರ್ಜಿ ಸಲ್ಲಿಸಲು ಫೆಬ್ರವರಿ 6 ಕೊನೆಯ ದಿನ, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ: 0820-2574810/811 ಅಥವಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳಮಹಡಿ, ಸಿಂಡಿಕೇಟ್ ಬ್ಯಾಂಕ್ ಹತ್ತಿರ, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ ಕಛೇರಿಯನ್ನು ಖುದ್ದಾಗಿ ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply