ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಬ್ರಹ್ಮಾವರ ತಾಲೂಕು ಘಟಕ ಸಾರಥ್ಯದಲ್ಲಿ ಶ್ರೀ ವಿನಾಯಕ ಯುವಕ ಮಂಡಲ ರಿ. ಸಾಬ್ರಕಟ್ಟೆ – ಯಡ್ತಾಡಿ ಸಹಕಾರದಲ್ಲಿ ನಡೆಯುವ ಬ್ರಹ್ಮಾವರ ತಾಲೂಕು ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನ ಹಗ್ಗಿನ ಹನಿ – 2021 (ಗುರುತಿನ ಅನುಸಂಧಾನ) ಕಾರ್ಯಕ್ರಮದ ಸಮ್ಮೇಳನಾಧ್ಯಕ್ಷರಾಗಿ ಸಾಹಿತಿ, ಸಂಶೋಧಕ ಬಾಬು ಶಿವಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.
ಜ.24ರಂದು ಸಾಬ್ರಕಟ್ಟೆ ಮಹಾತ್ಮ ಗಾಂಧಿ ಫ್ರೌಡ ಶಾಲೆಯಲ್ಲಿ ಸಮ್ಮೇಳನ ವಿವಿಧ ಗೋಷ್ಠಿ, ವಿಚಾರ ಮಂಡನೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ನರೇಂದ್ರ ಕುಮಾರ್ ಕೋಟ, ಬ್ರಹ್ಮಾವರ ತಾಲೂಕು ಕ.ಸಾ.ಪ ಅಧ್ಯಕ್ಷ ಸೂರಾಲು ನಾರಾಯಣ ಮಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.