ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ಆಚರಣೆಯ ಅಂಗವಾಗಿ ಮತದಾರರ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು.
ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ರೇಕಾ ಬನ್ನಾಡಿ ಮಾತನಾಡಿ, ಮತದಾನ ನಮ್ಮ ಹಕ್ಕು. ಕೆಲವು ಕಡೆ ನಗರ ಪ್ರದೇಶಗಳಲ್ಲಿ ಮತದಾನದಿಂದ ವಿದ್ಯಾವಂತರೆನಿಸಿಕೊಂಡವರು ಮತದಾನದಿಂದ ಹಿಂದೆ ಉಳಿಯುತ್ತಾರೆ. ಹಾಗೆ ಕೆಲವು ಕಡೆ ಅವಿದ್ಯಾವಂತರಿಗೆ ಮತದಾನದ ಮಹತ್ವದ ಬಗ್ಗೆ ಸಾಕಷು ತಿಳುವಳಿಕೆ ಇರುವುದಿಲ್ಲ. ನಾವು ನೀವು ಮತದಾನದ ಮಹತ್ವವನ್ನು ಕುರಿತು ಅರಿವು ಮೂಡಿಸುವ ಕಾರ್ಯ ಮಾಡಬೇಕಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ.ಗೊಂಡ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿಗಳಾದ ಅರುಣ್ ಎ.ಎಸ್. ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿಗಳಾದ ರಾಮಚಂದ್ರ ಆಚಾರಿ ಮತದಾರರ ಪ್ರತಿಜ್ಞಾ ವಿಧಿ ಸ್ವೀಕಾರವನ್ನು ಬೋಧಿಸಿದರು.