Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರೋಟರಿ ಅಸಿಸ್ಟೆಂಟ್ ಗವರ್ನರ್ ಡಾ. ನಾಗಭೂಷಣ ಉಡುಪ ಅವರಿಗೆ ಸನ್ಮಾನ
    ಊರ್ಮನೆ ಸಮಾಚಾರ

    ರೋಟರಿ ಅಸಿಸ್ಟೆಂಟ್ ಗವರ್ನರ್ ಡಾ. ನಾಗಭೂಷಣ ಉಡುಪ ಅವರಿಗೆ ಸನ್ಮಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ: ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡಿರುವ ರೋಟರಿ ಸಂಸ್ಥೆಯು ಕರೋನಾ ಪ್ರತಿಕೂಲ ಸನ್ನಿವೇಶಗಳಲ್ಲಿಯೂ ಕ್ರಿಯಾಶೀಲವಾಗಿ ಸಮಾಜಕ್ಕೆ ಸ್ಪಂದಿಸಿದೆ. ರೋಟರಿ ಸಂಸ್ಥೆಯ ಧ್ಯೇಯೋದ್ದೇಶಗಳಿಗೆ ಪೂರಕವಾಗಿ ರೋಟರಿ ಸಂಸ್ಥೆಗಳು ಕೆಲಸ ಮಾಡಿದ್ದು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ರೋಟರಿ ಸಂಸ್ಥೆಯ ಸೇವೆ ಲಭಿಸಿದೆ. ಗಂಗೊಳ್ಳಿ ರೋಟರಿ ಸಂಸ್ಥೆ ಇತರ ರೋಟರಿ ಸಂಸ್ಥೆಗಳಿಗೆ ಮಾದರಿಯಾಗಿದ್ದು, ರೋಟರಿಯ ವಿವಿಧ ಅನುದಾನಗಳನ್ನು ಸಮರ್ಪಕವಾಗಿ ಸದ್ಭಳಕೆ ಮಾಡಿಕೊಂಡು ಸಮಾಜದ ಅಭಿವೃದ್ಧಿಗೆ ಕೈಜೋಡಿಸಿರುವುದು ರೋಟರಿ ಜಿಲ್ಲೆಗೆ ಹೆಮ್ಮೆ ತರುವ ಸಂಗತಿಯಾಗಿದೆ ಎಂದು ರೋಟರಿ ಜಿಲ್ಲೆ 3182ರ ಗವರ್ನರ್ ರಾಜಾರಾಮ ಭಟ್ ಹೇಳಿದರು.

    Click Here

    Call us

    Click Here

    ಜಿಲ್ಲಾ ರೋಟರಿ ಗವರ್ನರ್ ವಾರ್ಷಿಕ ಅಧಿಕೃತ ಭೇಟಿ ಅಂಗವಾಗಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರೋಟರಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು.

    ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಸಿಸ್ಟೆಂಟ್ ಗವರ್ನರ್ ಡಾ.ನಾಗಭೂಷಣ ಉಡುಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿಯ ಸೈಂಟ್ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆಗೆ ವಾಟರ್ ಫಿಲ್ಟರ್ ಮತ್ತು ಗುಜ್ಜಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಥರ್ಮಲ್ ಸ್ಕ್ರೀನರ್ ಮತ್ತು ಸ್ಯಾನಿಟೈಸರ್ ಕೊಡುಗೆಯಾಗಿ ನೀಡಲಾಯಿತು. ಜೋನಲ್ ಲೆಫ್ಟಿನೆಂಟ್ ಐ.ನಾರಾಯಣ ಅವರು ಗಂಗೊಳ್ಳಿ ರೋಟರಿಯ ವಾರ್ಷಿಕ ಸಂಚಿಕೆ ‘ಗಂಗಾ’ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಇದೇ ಸಂದರ್ಭ ಡಾ.ಗಿರೀಶ ಕುಲಕರ್ಣಿ ಮತ್ತು ರಾಮಪ್ರಸಾದ್ ಗಂಗೊಳ್ಳಿ ರೋಟರಿ ಕ್ಲಬ್‌ನ ನೂತನ ಸದಸ್ಯರಾಗಿ ಸೇರ್ಪಡೆಗೊಂಡರು.

    ಬಿ.ಲಕ್ಷ್ಮೀಕಾಂತ ಮಡಿವಾಳ ಸ್ವಾಗತಿಸಿದರು. ಕಾರ್ಯದರ್ಶಿ ಎಂ.ನಾಗೇಂದ್ರ ಪೈ ವರದಿ ವಾಚಿಸಿದರು. ಉಪನ್ಯಾಸಕಿ ಸುಗುಣ ಗವರ್ನರ್ ಅವರನ್ನು ಪರಿಚಯಿಸಿದರು. ಉಪನ್ಯಾಸಕ ನಾರಾಯಣ ಇ.ನಾಯ್ಕ್ ಕಾರ್ಯಕ್ರಮ ನಿರ್ವಹಿಸಿದರು. ಮಾಜಿ ಅಧ್ಯಕ್ಷ ಕೆ.ರಾಮನಾಥ ನಾಯಕ್ ವಂದಿಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ

    06/07/2026

    ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ

    06/07/2026

    ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ

    06/07/2026
    Leave A Reply Cancel Reply

    8 − 4 =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.