Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ‘ಅಶೋಕ ವನಸಿರಿ’ ಒಂದು ದಿನದ ವಿಚಾರ ಸಂಕಿರಣ
    alvas nudisiri

    ಆಳ್ವಾಸ್ ‘ಅಶೋಕ ವನಸಿರಿ’ ಒಂದು ದಿನದ ವಿಚಾರ ಸಂಕಿರಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ: ಆಳ್ವಾಸ್ ಪಾರಂಪರಿಕಾ ಔಷಧ ಭಂಡಾರ ಮತ್ತು ಸಂಶೋಧನಾ ಕೇಂದ್ರ ಹಾಗೂ ಕರ್ನಾಟಕ ರಾಜ್ಯ ಔಷಧ ಗಿಡ ಮೂಲಿಕಾ ಪ್ರಾಧಿಕರ ಬೆಂಗಳೂರು ಇವರ ಸಹಯೋಗದೊಂದಿಗೆ ‘ಅಶೋಕ ವನಸಿರಿ’ ಎಂಬ ಒಂದು ದಿನದ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಿತು.

    Click Here

    Call us

    Click Here

    ಕಾರ್ಯಕ್ರಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ಮಾತನಾಡಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದವತಿಯಿಂದ ಮೂಡುಬಿದಿರೆ ಪರಿಸರದಲ್ಲಿ 1500 ಅಶೋಕ ಗಿಡಗಳನ್ನು ಹಂಚಿ, ಜನರಲ್ಲಿ ಈ ಗಿಡದ ಪ್ರಾಮುಖ್ಯತೆಯನ್ನು ಇನ್ನು ಹೆಚ್ಚು ತಿಳಿಸಲಾಗುವುದು, ಇಂದು ಎಷ್ಟೋ ಗಿಡಮೂಲಿಕೆಗಳು ನಶಿಸಿ ಹೋಗುತ್ತಿದ್ದು, ಅವುಗಳ ಸಂರಕ್ಷಣೆ ಮಾಡಬೇಕಿದೆ. ನಮ್ಮ ದೇಶದ ಆಯುರ್ವೇದ ಚಿಕಿತ್ಸೆಯ ಮಹತ್ವವನ್ನು ಎಲ್ಲೆಡೆ ಪಸರಿಸಬೇಕಿದೆ ಎಂದರು.

    ಕರ್ನಾಟಕ ರಾಜ್ಯ ಔಷಧ ಸಸ್ಯಗಳ ಪ್ರಾಧಿಕಾರದ ಮುಖ್ಯ ಕಾರ‍್ಯ ನಿರ್ವಹಣಾಧಿಕಾರಿ ಸುದರ್ಶನ ಜಿ.ಎ. ಮಾತನಾಡಿ, ಆತ್ಮ ನಿರ್ಭರ ಭಾರತದ ಕನಸನ್ನು ನನಸು ಮಾಡಲು ನಮ್ಮ ಪರಂಪರೆಯಲ್ಲಿ ಅಡಗಿದ ಆಯುರ್ವೇದ ವ್ಯವಸ್ಥೆಗೆ ಮೊದಲ ಪ್ರಾಶಸ್ತ್ಯ ನೀಡಿ ನಾವು ಆಳವಡಿಸಿಕೊಳ್ಳಬೇಕು ಎಂದರು.

    ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಎಸ್. ನಾಡಲ್‌ಕಾರ್ ಮಾತನಾಡಿ, ಯೋಗ ಮತ್ತು ಆಯುರ್ವೇದ ಉಪಯುಕ್ತತೆಯನ್ನು ನಾವೆಲ್ಲರು ಅಳವಡಿಸಿಕೊಳ್ಳಬೇಕು ಹಾಗೂ ಆಶೋಕ ವೃಕ್ಷದ ಉಪಯುಕ್ತತೆಯನ್ನು ಸಾರ್ವಜನಿಕರಿಗೆ ತಿಳಿಸಿ ಅದರ ಮಹತ್ವ ಎಲ್ಲರೂ ಅರಿಯುವಂತಾಗಬೇಕು ಎಂದು ತಿಳಿಸಿದರು.

    ಒಂದು ದಿನದ ವಿಚಾರ ಸಂಕಿರಣದಲ್ಲಿ ವಿವಿಧ ಆರು ವಿಷಯಗಳ ವಿಚಾರ ಗೋಷ್ಠಿ ಹಾಗೂ ಅಶೋಕ ವನಸಿರಿಗೆ ಸಂಬದಿಸಿದ ಪ್ಯಾನಲ್ ಡಿಸ್ಕಶನ್ ನಡೆಯಿತು.

    Click here

    Click here

    Click here

    Call us

    Call us

    ದಕ್ಷಿಣ ಹಾಗೂ ಉಡುಪಿ ಜಿಲ್ಲೆಯ 36 ಅರಣ್ಯ ಇಲಾಖೆಯ ಅಧಿಕಾರಿಗಳು, ಮೂಡುಬಿದಿರೆ, ಕಾರ್ಕಳ ಹಾಗೂ ಮಂಗಳೂರು ವಲಯದ ರೈತ ಸಂಘದಿಂದ 30 ಮಂದಿ ರೈತರು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಏಳು ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳು, 15ಕ್ಕೂ ಸಂಶೋಧನಾವಿದ್ಯಾರ್ಥಿಗಳು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ವಿಭಾಗಗಳ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಆಳ್ವಾಸ್ ಆಯುರ್ವೇದ ಕಾಲೇಜಿನ ಉಪನ್ಯಾಸಕಿ ಡಾ ಸೌಮ್ಯ ಸರಸ್ವತಿ ಅಶೋಕ ಗಿಡದ ಕುರಿತು ಸಮಗ್ರ ಸಂಶೋಧನೆ ನಡೆಸುತ್ತಿದ್ದಾರೆ.

    ಕಾರ್ಯಕ್ರಮದಲ್ಲಿ ಡಾ ಸುಬ್ರಮಣ್ಯ ಪದ್ಯಾಣ ಪ್ರಸ್ತಾವಿಕ ನುಡಿಗಳನ್ನಾಡಿದರು. ಆಳ್ವಾಸ್ ಆಯುರ್ವೇದ ಕಾಲೇಜಿನ ಪ್ರಾಂಶುಪಾಲೆ ಝೇನಿಕಾ ಡಿಸೋಜಾ ಸ್ವಾಗತಿಸಿ, ಡಾ ಗೀತಾ ಎಂ.ಬಿ ನಿರೂಪಿಸಿ, ಡಾ ಪ್ರಶಾಂತ ಜೈನ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ 80ನೇ ಸ್ವಾತಂತ್ರ‍್ಯ ದಿನಾಚರಣೆ

    15/08/2026

    ಕರ್ನಾಟಕ ರಾಜ್ಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ಗೆ 04 ಕೂಟ ದಾಖಲೆಯೊಂದಿಗೆ 33 ಪದಕಗಳು

    15/08/2026

    ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    11/08/2026
    Leave A Reply Cancel Reply

    19 − 12 =

    Call us

    Click Here

    Call us

    Call us

    Call us
    Highest Viewed Recently
    • ಯೋಧರಿಗೆ ಗೌರವಾರ್ಪಣೆ – ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿಶೇಷ ಸನ್ಮಾನ
    • ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ: ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಫ್ರೀಡಂ ಪ್ರೆನ್ಯೂರ್‌ ಏಕಪಾತ್ರಾಭಿನಯ ಸ್ಪರ್ಧೆ
    • ಹೆಜಮಾಡಿ ಟೋಲ್‌ನಲ್ಲಿ ಸ್ಥಳೀಯರಿಗೆ ರಿಯಾಯಿತಿ ಕೋರಿ ಪತ್ರ: ಜಿಲ್ಲಾಧಿಕಾರಿ ಭರವಸೆ
    • ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.