ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕುಂದಾಪುರ ತಾಲೂಕು ಕೃಷಿ ಇಲಾಖೆ ಮತ್ತು ಬೈಂದೂರು ರೈತ ಸಂಪರ್ಕ ಕೇಂದ್ರದ ಆಶ್ರಯದಲ್ಲಿ 2020-21ನೇ ಸಾಲಿನ ಮಣ್ಣು ಆರೋಗ್ಯ ಚೀಟಿ ಕಾರ್ಯಕ್ರಮದಡಿ ಸೋಮವಾರ ಆರಂಭವಾದ ಎರಡು ದಿನಗಳ ರೈತ ತರಬೇತಿ ಕಾರ್ಯಕ್ರಮ ಇಲ್ಲಿನ ಮರವಂತೆ ಸಾಧನಾ ಸಮುದಾಯ ಭವನದ ವಿ. ಕೆ. ಕಾಮತ್ ಸಭಾಗೃಹದಲ್ಲಿ ನಡೆಯಿತು.
ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಸದಸ್ಯ ಕೆ. ಬಾಬು ಶೆಟ್ಟಿ, ಕೃಷಿ ಲಾಭದಾಯಕ ಅಗಬೇಕೆಂದಿದ್ದರೆ ಮಿತವ್ಯಯದಲ್ಲಿ ಹೆಚ್ಚು ಉತ್ಪಾದನೆ ಆಗಬೇಕು. ಹಾಗಾಗಬೇಕಾದರೆ ರೈತರು ಕೃಷಿ ಸಂಬಂಧಿ ಅರಿವು ಪಡೆದು ಕೃಷಿ ಮಾಡಬೇಕು. ಜಿಲ್ಲೆಯಲ್ಲಿ ಹಿಂದಿದ್ದ ಸಾಂಪ್ರದಾಯಿಕ ಜಲ ಸಂವರ್ಧನ ಮೂಲಗಳು ನಶಿಸಿರುವುದರಿಂದ ಕೃಷಿಗೆ ಮತ್ತು ಕುಡಿಯಲು ನೀರಿನ ಅಭಾವ ಕಾಡುತ್ತಿದೆ. ಜನರು ನೀರು ಪೋಲಾಗುವುದನ್ನು ತಡೆಗಟ್ಟಿ, ಮಳೆಗಾಲದಲ್ಲಿ ನೀರು ಇಂಗಿಸುವ ಮೂಲಕ ನೀರಿನ ಕೊರತೆಯನ್ನು ನಿಭಾಯಿಸಬೇಕು ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್. ಜನಾರ್ದನ ಅಧ್ಯಕ್ಷತೆ ವಹಿಸಿದ್ದರು. ಕೃಷಿ ಅಧಿಕಾರಿ ಪರಶುರಾಮ ಸ್ವಾಗತಿಸಿದರು. ಗಾಯತ್ರಿದೇವಿ ನಿರೂಪಿಸಿ, ವಂದಿಸಿದರು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ. ವಿನಾಯಕ ರಾವ್, ಜಿಲ್ಲಾ ಕೃಷಿ ಯೋಜನಾ ನಿರ್ದೇಶಕ ಅನಂತ ಪ್ರಭು ಇದ್ದರು