ಕುಂದಾಪುರ: ನಗರದ ಬಿಜೆಪಿ ಯುವಮೋರ್ಚಾದ ವತಿಯಿಂದ ಸಾರ್ವಜನಿಕರು ಹಾಗೂ ಕಾರ್ಯಕರ್ತರಿಗಾಗಿ ಕೆಸರು ಗದ್ದೆಯ ಆಟೋಟ ಸ್ವರ್ಧೆ ‘ಶ್ರಾವಣದ ಕೆಸರಿನಲ್ಲಿ ಕಮಲ ಕೂಟ’ವು ಕುಂದಾಪುರ-ಬಸ್ರೂರು ರಸ್ತೆಯ ಸಟ್ವಾಡಿ ಬಸ್ ನಿಲ್ದಾಣದ ಬಳಿ ಇಂದು(ಅಗಸ್ಟ್.9) ಜರುಗಲಿದೆ.
ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ ಕಮಲ ಕೂಟವನ್ನು ಉದ್ಘಾಟಿಸಲಿದ್ದು, ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಮುಖ್ಯ ಅತಿಥಿಯಾಗಿ ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕ ರಘುಪತಿ ಭಟ್, ಉಡುಪಿ ಜಿಜೆಪಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ. ಉದಯಕುಮಾರ್ ಶೆಟ್ಟಿ, ಉಡುಪಿ ಜಿ.ಪಂ ಉಪಾಧ್ಯಕ್ಷ ಪ್ರಕಾಶ್ ಟಿ. ಮೆಂಡನ್, ಜಿ.ಪಂ. ಸದಸ್ಯ ಬಾಬು ಶೆಟ್ಟಿ, ಬಿಜೆಪಿ ಮೀನುಗಾರಿಕಾ ಪ್ರಕೋಷ್ಠದ ರಾಜ್ಯ ಸಂಚಾಲಕ ಕಿಶೋರ್ ಕುಮಾರ್ ಕುಂದಾಪುರ, ಯುವಮೋರ್ಚಾ ರಾಷ್ಟ್ರೀಯ ಕಾರ್ಯದರ್ಶಿ ವಿಕಾಸ್ ಪುತ್ತೂರು, ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ರಂಜಿತ್ ಸಾಲಿಯಾನ್, ಮಹಿಳಾ ಯುವಮೋರ್ಚಾ ಅಧ್ಯಕ್ಷೆ ಶೀಲಾ ಶೆಟ್ಟಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.










