ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕೊರೊನಾ ಭೀತಿಯ ಹಿನ್ನಲೆಯಲ್ಲಿ ವಿವಿಧ ಆಸ್ಪತ್ರೆಗಳ ರಕ್ತನಿಧಿ ಕೇಂದ್ರಗಳಲ್ಲಿ ರಕ್ತ ಸಂಗ್ರಹಣೆಯಲ್ಲೂ ತೀವ್ರ ಇಳಿಮುಖವಾಗುತ್ತಿದೆ. ರಕ್ತದಾನಿಗಳು ಸ್ವಯಂಪ್ರೇರಿತಾಗಿ ರಕ್ತನಿಧಿ ಕೇಂದ್ರಗಳಿಗೆ ಬಂದು ರಕ್ತದಾನ ಮಾಡಿ ರಕ್ತದ ಅಭಾವವನ್ನು ಕಡಿಮೆ ಮಾಡಲು ಸಹಕಾರ ನೀಡುವುದರ ಜೊತೆಗೆ ಒಬ್ಬರ ಜೀವ ಉಳಿಸುವ ಮಹತ್ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಉಡುಪಿ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರದ ಮುಖ್ಯಸ್ಥೆ ಡಾ. ವೀಣಾ ಕುಮಾರಿ ಹೇಳಿದರು.
ಅವರು ಗಂಗೊಳ್ಳಿಯ ಶ್ರೀ ಗುರುಜ್ಯೋತಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಸಂಸ್ಥೆಯ 37ನೇ ವಾರ್ಷಿಕೋತ್ಸವದ ಪ್ರಯುಕ್ತ ಉಡುಪಿ ಜಿಲ್ಲಾ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ಜರಗಿದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.
ಶ್ರೀ ಗುರುಜ್ಯೋತಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಸುಧಾಕರ ಖಾರ್ವಿ, ಕಾರ್ಯದರ್ಶಿ ಶ್ರೀನಿವಾಸ ಖಾರ್ವಿ, ಗೌರವಾಧ್ಯಕ್ಷ ರಾಘವೇಂದ್ರ ಖಾರ್ವಿ, ಗಂಗಾಧರ ಖಾರ್ವಿ ಐಪಿಎಲ್, ಗಂಗಾಧರ ಖಾರ್ವಿ, ಪ್ರದೀಪ ಖಾರ್ವಿ, ವಿಜಯ ಖಾರ್ವಿ, ಶ್ರೀಕಾಂತ ಬಿಲ್ಲವ, ಸತೀಶ ಖಾರ್ವಿ, ನಾಗರಾಜ ಖಾರ್ವಿ, ಸಂತೋಷ ಖಾರ್ವಿ, ಪ್ರಕಾಶ ಬಿಲ್ಲವ, ರಕ್ತನಿಧಿ ಕೇಂದ್ರದ ಸಿಬ್ಬಂದಿಗಳು, ಮತ್ತಿತರರು ಉಪಸ್ಥಿತರಿದ್ದರು.










