ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬೆಳವಣಿಗೆ : ಶಾಸಕ ಗೋಪಾಲ ಪೂಜಾರಿ

Call us

Call us

Call us

ಗಂಗೊಳ್ಳಿ: ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ದೊರೆಯಬೇಕೆನ್ನುವ ದೃಷ್ಟಿಯಿಂದ ರಾಜ್ಯ ಸರಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ಹಾಕಿಕೊಂಡಿರುವುದರಿಂದ ಶಿಕ್ಷಣ ಕ್ಷೇತ್ರ ಕ್ರಾಂತಿಕಾರಕ ಬೆಳವಣಿಗೆ ಕಂಡಿದೆ. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ, ಮಕ್ಕಳಿಗೆ ಮಧ್ಯಾಹ್ನದೂಟದ ವ್ಯವಸ್ಥೆ, ಕಬ್ಬಿಣದ ಅಂಶದ ಮಾತ್ರೆಗಳ ವಿತರಣೆ ಮಾಡಲಾಗುತ್ತಿದ್ದು, ವಾರಕ್ಕೆ ಮೂರು ದಿನ ವಿತರಣೆ ಮಾಡಲಾಗುತ್ತಿದ್ದ ಹಾಲನ್ನು ವಾರಕ್ಕೆ ಐದು ದಿನ ನೀಡಲು ಸರಕಾರ ಚಿಂತನೆ ನಡೆಸಿದೆ ಎಂದು ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು.

Call us

Click Here

ಅವರು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಜರಗಿದ ಸಮಾರಂಭದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿ ಮಾತನಾಡಿದರು.

ಉಡುಪಿ ಜಿಲ್ಲೆಯಲ್ಲಿ ಶಿಕ್ಷಕರ ಪ್ರಾಮಾಣಿಕ ಪ್ರಯತ್ನದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ. ಎಸ್.ವಿ. ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಇಂಟರ್‌ಲಾಕ್ ಅಳವಡಿಕೆಗೆ ಸುಮಾರು ೩.೫ ಲಕ್ಷ ರೂ. ಮಂಜೂರಾಗಿದ್ದು, ಕಾಲೇಜು ರಸ್ತೆಯನ್ನು ಅಭಿವೃದ್ಧಿ ಪಡಿಸಲು ಮುಂದಿನ ಕ್ರಿಯಾಯೋಜನೆಯಲ್ಲಿ ಅಗತ್ಯ ಅನುದಾನ ಒದಗಿಸುವುದಾಗಿ ಅವರು ಭರವಸೆ ನೀಡಿದರು.

ಜಿಎಸ್‌ವಿಎಸ್ ಅಸೋಸಿಯೇಶನ್ ಕಾರ್ಯದರ್ಶಿ ಎಚ್.ಗಣೇಶ್ ಕಾಮತ್, ಶಾಲೆಯ ಸಂಚಾಲಕ ಎನ್.ಸದಾಶಿವ ನಾಯಕ್, ಜಿಪಂ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ, ಪತ್ರಕರ್ತ ಬಿ.ರಾಘವೇಂದ್ರ ಪೈ, ಪದವಿಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಕವಿತಾ ಎಂ.ಸಿ. ಉಪಸ್ಥಿತರಿದ್ದರು.

ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ವಾಮನದಾಸ ಭಟ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಕೆ.ಸದಾನಂದ ವೈದ್ಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Click here

Click here

Click here

Click Here

Call us

Call us

Leave a Reply