Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯುವ ಸ್ಪಂದನ ಕೇಂದ್ರದಿಂದ ಯುವಜನರಿಗೆ ವೃತ್ತಿಪರ ಮಾರ್ಗದರ್ಶನಕ್ಕೆ ಆದ್ಯತೆ: ಡಿಸಿ ಜಿ. ಜಗದೀಶ್
    ಉಡುಪಿ ಜಿಲ್ಲೆ

    ಯುವ ಸ್ಪಂದನ ಕೇಂದ್ರದಿಂದ ಯುವಜನರಿಗೆ ವೃತ್ತಿಪರ ಮಾರ್ಗದರ್ಶನಕ್ಕೆ ಆದ್ಯತೆ: ಡಿಸಿ ಜಿ. ಜಗದೀಶ್

    Updated:10/02/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಪಟ್ಟಣಗಳ ಶಾಲಾ ಕಾಲೇಜು ಮಾತ್ರವಲ್ಲದೇ ಗ್ರಾಮ ಮಟ್ಟದ ಶಾಲಾ ಕಾಲೇಜು, ವಿದ್ಯಾರ್ಥಿ ವಸತಿ ನಿಲಯ, ಸಂಘ ಸಂಸ್ಥೆಗಳ ಯುವ ಜನರಿಗೆ, ಯುವ ಸ್ಪಂದನ ಕಾರ್ಯಕ್ರಮದ ಬಗ್ಗೆ ಅರಿವು ಮೂಡಿಸಿ ಸದೃಢ ಸಮಾಜ ನಿರ್ಮಾಣಕ್ಕೆ ಒತ್ತು ಕೊಡಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್  ತಿಳಿಸಿದರು.

    Click Here

    Call us

    Click Here

    ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸರಕಾರದ ಯೋಜನೆಯಾದ ಯುವಸ್ಪಂದನ ಕಾರ್ಯಕ್ರಮದ ಸಲಹಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ವೃತ್ತಿಪರ ಮಾರ್ಗದರ್ಶನದ ಪೋಸ್ಟರ್‌ಗಳನ್ನು ಶಾಲಾ ಕಾಲೇಜು, ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಹಚ್ಚಬೇಕೆಂದು ಸೂಚಿಸಿದರು. ನೆಹರೂ ಯುವ ಕೇಂದ್ರ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಸರಕಾರೇತರ ಸಂಸ್ಥೆಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಅರಿವು ಕಾರ್ಯಕ್ರಮ ಮಾಡುವಂತೆ ಸೂಚಿಸಿದರು.

    ಯುವ ಸ್ಪಂದನ ಕೇಂದ್ರದ ಕ್ಷೇತ್ರ ಸಂಪರ್ಕಾಧಿಕಾರಿ ಸುಜನ್, 15 ರಿಂದ 35 ವರ್ಷ ವಯೋಮಿತಿಗಳ ಯುವ ಜನರಿಗೆ ಆರೋಗ್ಯ ಮತ್ತು ಜೀವನ ಶೈಲಿ, ಶಿಕ್ಷಣ ಮತ್ತು ವೃತ್ತಿ ವಿಷಯಗಳು, ಸಂಬಂಧಗಳು, ವ್ಯಕ್ತಿತ್ವ ಬೆಳವಣಿಗೆ, ಸುರಕ್ಷತೆ, ಲಿಂಗ ಮತ್ತು ಲೈಂಗಿಕತೆ ವಿಷಯಗಳ ಕುರಿತು ಇರುವ ಗೊಂದಲ ಮತ್ತು ಸವಾಲುಗಳಿಗೆ ಮಾರ್ಗದರ್ಶನ ಮತ್ತು ಆಪ್ತ ಸಮಾಲೋಚನೆಯ ಮೂಲಕ ಯುವ ಜನತೆಯನ್ನು ಸದೃಢಗೊಳಿಸುವ ಈ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಲು ಮನವಿ ಮಾಡಿದರು. 2014 ರಿಂದ ಇದುವರೆಗೆ ಉಡುಪಿ ಜಿಲ್ಲೆಯಲ್ಲಿ 436 ಸಂಪನ್ಮೂಲ ಕ್ರೋಢೀಕರಣ, 829 ಅರಿವು ಕಾರ್ಯಕ್ರಮಗಳಲ್ಲಿ ಒಟ್ಟು 5552 ಯುವಕರು ಮತ್ತು 6802 ಯುವತಿಯರು ಭಾಗವಹಿಸಿದ್ದು ಅದರಲ್ಲಿ 401 ಜನರು ಮಾರ್ಗದರ್ಶನ ಪಡೆದಿರುವ ಬಗ್ಗೆ ಮಾಹಿತಿ ನೀಡಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ. ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೆ. ಆರ್. ಫಡ್ನೇಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸುಧೀರ್ ಚಂದ್ರ ಸೂಡ, ಜಿಲ್ಲಾ ಪೋಲಿಸ್ ಇಲಾಖೆಯ ಎನ್.ಜಿ. ಚರಣ್, ನೆಹರೂ ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ವಿಲ್ಫೆçಡ್ ಡಿಸೋಜ, ನಗರ ಸಭೆಯ ಪೌರಾಯುಕ್ತ ಉದಯ ಶೆಟ್ಟಿ ಮತ್ತು ಸಲಹಾ ಸಮನ್ವಯ ಸಮಿತಿ ಸದಸ್ಯರು, ಯುವ ಸ್ಪಂದನ ಕೇಂದ್ರದ ಯುವ ಸಮಾಲೋಚಕಿ ಶ್ಯಾಮಲಾ ಕಿರಣ್, ಯುವ ಪರಿವರ್ತಕ ನರಸಿಂಹ ಗಾಣಿಗ, ಚೇತನ್ ಕುಮಾರ್, ಪಾರ್ಥಸಾರಥಿ ಕುಂಜಾರುಗಿರಿ, ಜ್ಯೋತಿ ಪಿ. ಎನ್. ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    7 + twelve =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.