ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ವಿದ್ಯಾರ್ಥಿ ಜೀವನವು ಸೇವಾಭಾವ ಮತ್ತು ಪರಿಸರ ಕಾಳಜಿ ರೂಢಿಸಿಕೊಳ್ಳಲು ಸೂಕ್ತ ಘಟ್ಟ ಎಂದು ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಹೇಳಿದರು.
ಅವರು ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವನ್ನು ಈಚೆಗೆ ಉದ್ಘಾಟಿಸಿ ಮಾತನಾಡಿದರು.
ಅರಣ್ಯ ಇಲಾಖೆಯಲ್ಲಿ ಇರುವ ಹುದ್ದೆಗಳ ವಿವರ ಮತ್ತು ಉದ್ಯೋಗ ಮಾಹಿತಿ ನೀಡಿದರು.ಪ್ರಾಂಶುಪಾಲ ಡಾ. ರಘು ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಯೋಜನೆ ಘಟಕ–2ರ ಯೋಜನಾಧಿಕಾರಿ ಲತಾ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿ ಸುಶ್ಮಿತಾ ಸ್ವಾಗತಿಸಿದರು. ರಮ್ಯಾ ನಾಯಕ್ ವಂದಿಸಿದರು. ಸೌಮ್ಯಾ ನಿರೂಪಿಸಿದರು. ಘಟಕ–1ರ ಯೋಜನಾಧಿಕಾರಿ ನಾಗರಾಜ ಶೆಟ್ಟಿ, ಉಪನ್ಯಾಸಕರು, ಘಟಕಗಳ ವಿದ್ಯಾರ್ಥಿ ಸದಸ್ಯರು ಇದ್ದರು.