ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕು ಕೋಟೇಶ್ವರ ಗ್ರಾಮ ಪಂಚಾಯತಿಯ ಮೊದಲ ಹಂತದ ೩೦ ತಿಂಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ಕೃಷ್ಣ ಗೊಲ್ಲ, ಉಪಾಧ್ಯಕ್ಷರಾಗಿ ರಾಗಿಣಿ ದೇವಾಡಿಗ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಕೋಟೇಶ್ವರ ಗ್ರಾಮ ಪಂಚಾಯತಿ ಕಚೇರಿಯಲ್ಲಿ ನಡೆಯಿತು. ಚುನಾವಣಾಧಿಕಾರಿಯಾಗಿ ಕುಸುಮಾಕರ ಶೆಟ್ಟಿ ಭಾಗವಹಿಸಿದ್ದರು.
ಕೋಟೇಶ್ವರ ಗ್ರಾಮ ಪಂಚಾಯತಿ ಒಟ್ಟು 26 ಸದಸ್ಯ ಸ್ಥಾನವನ್ನು ಹೊಂದಿದ್ದು, ಇದರಲ್ಲಿ 20 ಬಿಜೆಪಿ ಬೆಂಬಲಿತರು, 5 ಕಾಂಗ್ರೆಸ್ ಬೆಂಬಲಿತರು, 1 ಪಕ್ಷೇತರರು ಇದ್ದಾರೆ. ಮೀಸಲಾತಿ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ‘ಅ’ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಯಿತು.