ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ನಾವುಂದ ಗ್ರಾಮ ಪಂಚಾಯತಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಗುರುವಾರ ನಡೆಯಿತು. ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜಾನಕಿ ಮೊಗವೀರ, ಉಪಾಧ್ಯಕ್ಷರಾಗಿ ನಿರ್ಮಲಾ ಶೆಟ್ಟಿ ಆಯ್ಕೆಯಾಗಿದ್ದಾರೆ.
ಒಟ್ಟು 15 ಸ್ಥಾನಗಳ ಪೈಕಿ 12 ಕಾಂಗ್ರೆಸ್, 3 ಬಿಜೆಪಿ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದರು. ಮೀಸಲಾತಿ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಮಹಿಳೆಗೆ ಮೀಸಲು ನಿಗದಿಯಾಗಿತ್ತು.