ಮೂಡ್ಲಕಟ್ಟೆ ಎಂಐಟಿ: ತಾಂತ್ರಿಕ ಕಾರ್ಯಾಗಾರ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ  ‘ಡೆವಲಪ್ಮೆಂಟ್ ಆಫ್ ಸಿಗ್ನಲ್ಸ್ ಆಂಡ್ ಸಿಸ್ಟಮ್ಸ್ ಯುಸಿಂಗ್ ಮ್ಯಾಟ್ ಲ್ಯಾಬ್’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು.

Call us

Click Here

ಸಂಪನ್ಮೂಲ ವ್ಯಕ್ತಿಯಾಗಿ ನಿಟ್ಟೆ ವಿಶ್ವವಿದ್ಯಾಲಯದ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕಿ ಡಾ. ಉಷಾ ದೆಸಾಯಿ ಭೇಟಿ ನೀಡಿ, ಕಾರ್ಯಾಗಾರವನ್ನು ಉದ್ಘಾಟಿಸಿ ನಮ್ಮ ದಿನ ನಿತ್ಯದ ಜೀವನದಲ್ಲಿ ಸಿಗ್ನಲ್ಸ್ ಹೇಗೆ ಅವಿಭಾಜ್ಯ ಅಂಗವಾಗಿದೆ ಎಂದು ವಿವರಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಚಂದ್ರರಾವ್ ಮದಾನೆ ಮಾತನಾಡಿ, ಪಠ್ಯದ ಜೊತೆಗೆ ಅದಕ್ಕೆ ಪೂರಕವಾದ ಇಂತಹ ಕಾರ್ಯಾಗಾರಗಳು ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂದು, ಹಾಗೂ ಕಾರ್ಯಾಗಾರ ಸಂಯೋಜಕರನ್ನು ಅಭಿನಂದಿಸಿದರು.

ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ. ಮೆಲ್ವಿನ್ ಡಿ ಸೋಜಾ ಮಾತನಾಡಿ, ಕಾರ್ಯಾಗಾರವನ್ನು ಉತ್ತಮ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾಲೇಜಿನ ಡೀನ್, ವಿಭಾಗದ ಮುಖ್ಯಸ್ಥರು, ಸಿಬ್ಬಂದಿ ವರ್ಗ ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ಸುಕೇಶ್ ಸ್ವಾಗತಿಸಿ, ಮಾಧುರಿ ವಂದಿಸಿದರು, ಅಮರ್ ಕಾರ್ಯಕ್ರಮ ನಿರೂಪಿಸಿದರು.

Click here

Click here

Click here

Click Here

Call us

Call us

Leave a Reply