ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಭಾಗದ ಮಾಹಿತಿ ತಂತ್ರಜ್ಞಾನ ಘಟಕದ ವತಿಯಿಂದ ಐಟಿ ಕ್ಷೇತ್ರದಲ್ಲಿ ವೃತ್ತಿ ಆಯ್ಕೆಯ ಕುರಿತು ಕಾರ್ಯಕ್ರಮ ನಡೆಯಿತು.
ಮುಖ್ಯ ಅತಿಥಿಯಾಗಿ ಶ್ರೀಕಾಂತ್ ಭಂಡಾರಿ ಐಟಿ ಕ್ಷೇತ್ರದಲ್ಲಿ ವೃತ್ತಿ ಆಯ್ಕೆಯ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಅಬ್ಬುಲ್ ರೆಹಮಾನ್, ವಿಭಾಗದ ಹಿರಿಯ ಉಪನ್ಯಾಸಕಿ ನೂತನ್ ಉಪಸ್ಥಿತರಿದ್ದರು.
ಘಟಕದ ಸಂಯೋಜಕಿಯಾದ ಉಪನ್ಯಾಸಕಿ ಹರ್ಷಿತ ಜಿ. ಪಿ ಸ್ವಾಗತಿಸಿದರು, ವಿದ್ಯಾರ್ಥಿ ನವನೀತ್ ವಂದಿಸಿದರು. ಘಟಕದ ವಿದ್ಯಾರ್ಥಿ ಕಾರ್ಯದರ್ಶಿ ಅಲ್-ತಸ್ಮೀಯ ಮುಖ್ಯ ಅತಿಥಿಯನ್ನು ಪರಿಚಯಿಸಿ, ವಿದ್ಯಾರ್ಥಿ ಸಾಹಿಲ್ ಕಾರ್ಯಕ್ರಮ ನಿರೂಪಿಸಿದರು.










