ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಯೂತ್ ರೆಡ್‌ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ, ಎನ್.ಸಿ.ಸಿ (ಆರ್ಮಿ ಮತ್ತು ನೇವಲ್) ಮತ್ತು ರೋವರ್ಸ್ ಮತು ರೇಂಜರ್ಸ್ ಮಣಿಪಾಲದ ಕೆ. ಎಂ. ಸಿ ಆಸ್ಪತ್ರೆ ಹಾಗೂ ಕುಂದಾಪುರದ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.
ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್.ಪಿ. ನಾರಾಯಣ ಶೆಟ್ಟಿ ವಹಿಸಿದ್ದರು. ಶಿಬಿರದ ಉದ್ಘಾಟನೆಯನ್ನು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ಇದರ ಸಭಾಪತಿಗಳಾದ ಎಸ್. ಜಯಕರ ಶೆಟ್ಟಿ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ಕೆ. ಎಂ.ಸಿ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯರಾದ ಡಾ. ವೇಣು ರಾಜೇಂದ್ರನ್ ಮತ್ತು ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ವೈದ್ಯೆಯಾದ ಡಾ. ಸೋನಿ ಡಿ. ಕೋಸ್ಟ ಆಗಮಿಸಿ ರಕ್ತದಾನದ ಮಹತ್ವವನ್ನು ತಿಳಿಸಿದರು. ಈ ಶಿಬಿರದಲ್ಲಿ ೧೭೫ ಯೂನಿಟ್‌ಗಳಷ್ಟು ರಕ್ತ ಸಂಗ್ರಹವಾಗಿದ್ದು, ಕೆ. ಎಂ.ಸಿಯ ಮತ್ತು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ರಕ್ತ ನಿಧಿ ಕೇಂದ್ರಗಳಿಗೆ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಸತ್ಯನಾರಾಯಣ ಸ್ವಾಗತಿಸಿ, ಡಾ. ಜಿ. ಎಂ. ಗೊಂಡ ವಂದಿಸಿ, ವಿದ್ಯಾರ್ಥಿನಿ ಕೃತಿ ಎಂ. ಶೆಟ್ಟಿ ನಿರೂಪಿಸಿದರು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಪಧಾಧಿಕಾರಿಗಳು, ಅಧ್ಯಾಪಕರು, ಅಧ್ಯಾಪಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.