ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ: ರಾಯಚೂರು ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆ ಇದರ ಆಶ್ರಯದಲ್ಲಿ ರಾಯಚೂರಿನ ಕೃಷಿ ವಿಶ್ವವಿದ್ಯಾನಿಲಯ ಕ್ಯಾಂಪಸ್‌ನಲ್ಲಿ ಮುಕ್ತಾಯಗೊಂಡ ರಾಜ್ಯ ಮಟ್ಟದ ಪುರುಷರ ಆಹ್ವಾನಿತ ಬಾಲ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮೂಡಬಿದ್ರೆ ಆಳ್ವಾಸ್ ಪುರುಷರ ತಂಡ ಪ್ರಶಸ್ತಿಯನ್ನು ಗೆದ್ದುಕೊಂತು.
ರಾಜ್ಯದ ಸುಮಾರು ೨೦ ಆಹ್ವಾನಿತ ತಂಡಗಳು ಭಾಗವಹಿಸಿದ್ದ ಈ ಟೂರ್ನಿಯ ಫೈನಲ್ಸ್‌ನಲ್ಲಿ ಆಳ್ವಾಸ್ ತಂಡ ಸ್ಕಲ್ವಿ ಅಸ್ತ್ರ ಬೆಂಗಳೂರು ತಂಡವನ್ನು 35-30 ಹಾಗೂ 35-21 ನೇರ ಸೆಟ್‌ಗಳಿಂದ ಸೋಲಿಸಿ ಪ್ರಶಸ್ತಿಯನ್ನು ಜಯಿಸಿಕೊಂಡಿತು. ಲೀಗ್ ಹಾಗೂ ಸೂಪರ್ ಲೀಗ್ ಮಾದರಿಯಲ್ಲಿ ಜರುಗಿದ ಪಂದ್ಯಾಟದಲ್ಲಿ ಸ್ಕಲ್ವಿ ಅಸ್ತ್ರ ಬೆಂಗಳೂರು ತಂಡ ದ್ವಿತೀಯ ಸ್ಥಾನವನ್ನು, ಕಾಮಧೇನು ಸ್ಪೋರ್ಟ್ಸ್ ಕ್ಲಬ್ ಬೆಂಗಳೂರು ತಂಡ ತೃತೀಯ ಸ್ಥಾನವನ್ನು ಹಾಗೂ ಅತಿಥೇಯ ರಾಯಚೂರು ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆ ಚತುರ್ಥ ಸ್ಥಾನವನ್ನು ಪಡೆದುಕೊಂಡಿತು.