ಹಳದಿ ರೋಗಕ್ಕೆ ಪರಿಹಾರ: ಮುಖ್ಯಮಂತ್ರಿಗೆ ಮನವಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಹಳದಿ ರೋಗದಿಂದ ಅಡಕೆ ತೋಟ ನಾಶ ಹೊಂದಿದವರಿಗೆ ಒಂದು ಬಾರಿ ಪರಿಹಾರವಾಗಿ 25 ಕೋಟಿ ರೂ. ಪ್ಯಾಕೇಜ್

Call us

Click Here

ಬಜೆಟ್‌ನಲ್ಲಿ ಘೋಷಿಸಲು ಹಾಗೂ ಹಳದಿ ರೋಗ ನಿವಾರಣೆಗೆ ಉನ್ನತ ಮಟ್ಟದ ಸಂಶೋಧನೆಗೆ ಆದೇಶ ನೀಡುವಂತೆ ಕರಾವಳಿ ಬಾಗದ ಮಂತ್ರಿಗಳು ಹಾಗು ಮಲೆನಾಡು ಮತ್ತು ಕರಾವಳಿಯ ಶಾಶಕರುಗಳು ತೋಟಗಾರಿಕಾ ಸಚಿವರೊಂದಿಗೆ ಸಭೆ ನಡೆಸಿ ಮುಂದುವರಿದ ಫಲವಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದರು.

ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಅವರು ಬಜೆಟ್‌ನಲ್ಲಿ ಪ್ಯಾಕೇಜ್ ಘೋಷಿಸುವುದಾಗಿ ಭರವಸೆ ನೀಡಿದ್ದಾರೆ. ಹಳದಿ ರೋಗ ನಿವಾರಣೆಗೆ ಉನ್ನತ ಮಟ್ಟದ ಸಂಶೋಧನೆಗೆ ಆದೇಶ ನೀಡುವುದಾಗಿಯೂ ಮುಖ್ಯಮಂತ್ರಿ ಅವರು ಭರವಸೆ ನೀಡಿದರು

ತೋಟಗಾರಿಕೆ ಸಚಿವ ಆರ್. ಶಂಕರ್, ಕರಾವಳಿಯ ಸಚಿವರಾದ ಎಸ್.ಅಂಗಾರ ಮತ್ತು ಕೋಟ ಶ್ರೀನಿವಾಸ ಪೂಜಾರಿ ಅವರ ನೇತ್ರತ್ವದಲ್ಲಿ ಶಾಸಕರ ನಿಯೋಗ ಮುಖ್ಯಮಂತ್ರಿ ಬಿ.  ಎಸ್.  ಯಡಿಯೂರಪ್ಪ ಅವರನ್ನು ಭೇಟಿಯಾಗಿತ್ತು. ಅಡಕೆಗೆ ಪ್ರಸ್ತುತ ಬೆಲೆ ಬಂದಿದೆ. ಆದರೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಹಳದಿ ರೋಗದಿಂದ ಅಡಕೆ ತೋಟಗಳು ಸರ್ವ ನಾಶವಾಗಿವೆ. ಅಡಕೆ ಬೆಳೆಗಾರರನ್ನು ರಕ್ಷಣೆ ಮಾಡುವ ಅವಶ್ಯಕತೆ ಇದೆ. ದ.ಕ., ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಅಡಕೆಗೆ ಹಳದಿ ರೋಗದಿಂದ ಭಾದಿತರಾದ ರೈತರಿಗೆ ಸಾಲ ಮನ್ನಾ ಮಾಡಬೇಕು.

ಪರ್ಯಾಯ ಕೃಷಿ ಮಾಡುವವರಿಗೆ ದೀರ್ಘಾವಧಿ ಸಾಲ ಮಂಜೂರು ಮಾಡಬೇಕೆಂದು ಮನವಿಯಲ್ಲಿ ವಿನಂತಿಸಲಾಗಿದೆ. ಶಾಸಕರಾದ ಸಂಜೀವ ಮಠಂದೂರು, ಹರೀಶ್ ಪೂಂಜಾ, ರಾಜೇಶ್ ನಾಯ್ಕ, ಕೆ. ಜಿ. ಬೋಪಯ್ಯ, ಅರಗ ಜ್ಞಾನೇಂದ್ರ ನಿಯೋಗದಲ್ಲಿದ್ದರು.

Click here

Click here

Click here

Click Here

Call us

Call us

Leave a Reply