ಕುಂದಾಪುರ: ದೇವಸ್ಥಾನದ ಆವರಣದಲ್ಲಿಯೇ ಆತ್ಮಹತ್ಯೆಗೆ ಶರಣಾದ ಯುವಕ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದೇವಳದ ಆವರಣದಲ್ಲಿಯೇ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರ ತಾಲೂಕಿನ ತೆಕ್ಕಟ್ಟೆಯಲ್ಲಿ ನಡೆದಿದೆ.

Call us

Click Here

ತೆಕ್ಕಟ್ಟೆಬಾರಾಳಿಬೆಟ್ಟು ನಿವಾಸಿ ಚಂದ್ರ ಪೂಜಾರಿ (35) ಎಂಬ ಯುವಕ ತೆಕ್ಕಟ್ಟೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಚಂದ್ರ ಪೂಜಾರಿ ನಿತ್ಯವೂ ದೇವಸ್ಥಾನಕ್ಕೆ ಬಂದು ಹೋಗುತ್ತಿದ್ದ ಎನ್ನಲಾಗುತ್ತಿದೆ. ದೇವಸ್ಥಾನದ ಧಾರ್ಮಿಕ ಕಾರ್ಯಗಳಲ್ಲಿಯೂ ಭಾಗಿಯಾಗುತ್ತಿದ್ದ ಎನ್ನಲಾಗಿದೆ.

ಎರಡು ವರ್ಷಗಳ ಹಿಂದೆಯಷ್ಟೇ ಮದುವೆಯಾಗಿದ್ದು ಚಂದ್ರ ಪೂಜಾರಿ ಕಳೆದ ಕೆಲ ಸಮಯದಿಂದಲೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ದೇವಸ್ಥಾನದಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಬಾವಿಯ ಹಗ್ಗವನ್ನು ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಭಾನುವಾರ ಘಟನೆ ಬೆಳಕಿಗೆ ಬಂದಿದೆ. ಕೋಟ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

Leave a Reply