ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘ ರಿ. ಇದರ ನೂತನ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಬೀಜಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕುಂದಾಪುರ ನಗರದಲ್ಲಿರುವ ಶ್ರೀ ನಾರಾಯಣಗುರು ಸಭಾಭವನದಲ್ಲಿ ಜರುಗಿದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.
ನೂತನ ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಪೂಜಾರಿ ವಿಠಲವಾಡಿ, ಕೋಶಾಧಿಕಾರಿ ಶಿವಾನಂದ ಪೂಜಾರಿ ಗಂಗೊಳ್ಳಿ ಆಯ್ಕೆಯಾಗಿದ್ದಾರೆ.
ವಾರ್ಷಿಕ ಮಹಾಸಭೆ ಅಧ್ಯಕ್ಷತೆಯನ್ನು ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ನಿಕಟಪೂರ್ವ ಅಧ್ಯಕ್ಷ ನಾರಾಯಣ ಬಿಲ್ಲವ ವಹಿಸಿದ್ದು, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಮಂಜು ಬಿಲ್ಲವ ಸ್ವಾಗತಿಸಿ, ನಿಕಟಪೂರ್ವ ಕೋಶಾಧಿಕಾರಿ ಟಿ.ಕೆ. ಕೋಟ್ಯಾನ್ ವಂದಿಸಿದರು.