ರಾಜ್ಯ ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ದೊರಕಿದ್ದೇನು? ಇಲ್ಲಿದೆ ವಿವರ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ವಿಧಾನ ಸಭೆಯಲ್ಲಿ ಮಂಡಿಸಿರುವ 2021-22ನೇ ಸಾಲಿನ ಕರ್ನಾಟಕ ಬಜೆಟ್ನ ಒಟ್ಟು ಗಾತ್ರ 2.43 ಕೋಟಿ ರೂ.ಗಳಾಗಿದೆ. ಕಳೆದ ವರ್ಷ 2,33,137 ಕೋಟಿ ರೂ. ಗಾತ್ರದ ಬಜೆಟ್ನ್ನು ಮಂಡಿಸಿದ್ದರು. ಈ ಬಾರಿ ಅದಕ್ಕೆ 10,600 ಕೋಟಿ ರೂ.ಗಳಷ್ಟು ಹೆಚ್ಚುವರಿ ಸೇರ್ಪಡೆಯಾಗಿದೆ. ಇದರಲ್ಲಿ ಕರಾವಳಿ ಹಾಗೂ ಉಡುಪಿ ಜಿಲ್ಲೆಗೆ ಯಾವೆಲ್ಲಾ ಯೋಜನೆಗಳನ್ನು ಘೋಷಿಸಲಾಗಿದೆ ಎನ್ನುವ ಸಂಕ್ಷಿಪ್ತ ಅಂಶಗಳು ಇಲ್ಲಿವೆ.

Call us

Click Here

  • ಅಡಿಕೆ ಬೆಳೆಗಾರರನ್ನು ಬಾಧಿಸುತ್ತಿರುವ ಹಳದಿ ಎಲೆ ರೋಗದ ಕುರಿತ ಸಂಶೋಧನೆ ಹಾಗೂ ಪರ್ಯಾಯ ಬೆಳೆಯನ್ನು ಪ್ರೋತ್ಸಾಹಿಸಲು 25 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ.
  • ಉಡುಪಿ ಜಿಲ್ಲೆಯ ತ್ರಾಸಿ ಮರವಂತೆ ಒತ್ತಿನಣೆ ಹಾಗೂ ಇತರ ಕಡಲತೀರಗಳನ್ನು ಅಂತಾರಾಷ್ಟ್ರೀಯ ದರ್ಜೆಗೆ ರಿಸಲು 10 ಕೋಟಿ ರೂ ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿ.
  • ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ಸೋಮೇಶ್ವರ ಕಡಲತೀರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ 10 ಕೋಟಿ ರೂ ಅನುದಾನ.
  • ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಕರಾವಳಿ ಅಭಿವೃದ್ಧಿ ಮಂಡಳಿಯಾಗಿ ಪುನರ್ರಚನೆಗೆ ವಿಧೇಯಕ ತರಲು ಕ್ರಮ. /ಕುಂದಾಪ್ರ ಡಾಟ್ ಕಾಂ ಸುದ್ದಿ/
  • ಮಂಗಳೂರಿನ ಗಂಜಿಮಠದಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ ಮಾಡಲು 150 ಕೋಟಿ ರೂ.

 

  • ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ನೂರು ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕಾಲುಸಂಕ ಗಳನ್ನು ನಿರ್ಮಿಸುವ ಗ್ರಾಮ ಬಂಧ ಸೇತುವೆ ಯೋಜನೆ ಅನುಷ್ಠಾನ.
  • ಮಂಗಳೂರು ಮತ್ತು ಪಣಜಿ ನಡುವೆ ಜಲಮಾರ್ಗಗಳ ಅಭಿವೃದ್ಧಿ ಕೇಂದ್ರ ಸರಕಾರದ ರಾಷ್ಟ್ರೀಯ ಜಲಮಾರ್ಗಗಳ ಪ್ರಾಧಿಕಾರದ ಸಹಾಯದೊಂದಿಗೆ ಒಟ್ಟು 60 ಕೋಟಿ ರೂ ವೆಚ್ಚದಲ್ಲಿ ರಾಜ್ಯದ ಐದು ಜಲಮಾರ್ಗಗಳ ಅಭಿವೃದ್ಧಿಗೆ ಕ್ರಮ .
  • ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಕಾರ್ಯಕ್ರಮಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರದಿಂದ 62 ಕೋಟಿ ರೂ. ಅನುದಾನ.
  • ರಾಜ್ಯದಲ್ಲಿ 16 ಮೀನು ಮರಿ ಉತ್ಪಾದನಾ ಕೇಂದ್ರಗಳ ತಾಂತ್ರಿಕ ಉನ್ನತೀಕರಣಕ್ಕೆ 2ಕೋಟಿ ಅನುದಾನ.
  • ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ವತಿಯಿಂದ ಆರು ಕೋಟಿ ರೂ.ಗಳ ವೆಚ್ಚದಲ್ಲಿ ಮೀನು ಉತ್ಪನ್ನಗಳ ಸಂಸ್ಕರಣೆಗೆ ಆಧುನಿಕ ಸಂಸ್ಕರಣಾ ಮತ್ತು ಮೌಲ್ಯವರ್ಧನಾ ಕೇಂದ್ರ ಸ್ಥಾಪನೆ. /ಕುಂದಾಪ್ರ ಡಾಟ್ ಕಾಂ ಸುದ್ದಿ/
  • ರಾಜ್ಯಾದ್ಯಂತ 30 ಕೋಟಿ ರೂ.ಗಳ ವೆಚ್ಚದಲ್ಲಿ ಮೀನು ಮಾರಾಟ ಘಟಕ ಹಾಗೂ ಮತ್ಸ್ಯ ದರ್ಶಿನಿಗಳ ಸ್ಥಾಪನೆ.
  • ಮೀನು ಮತ್ತು sea weed ಗಳಿಂದ ಲಭ್ಯವಾಗುವ bioactive compoundsಗಳನ್ನು ಉಪಯೋಗಿಸಿ ಲಘು ಆಹಾರಗಳ ತಯಾರಿಕೆಯನ್ನು ಉತ್ತೇಜಿಸಲು ಮಂಗಳೂರಿನಲ್ಲಿ Advanced Biotech Innovation Center for Aqua-Marine ಸ್ಥಾಪನೆ

Leave a Reply