ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕೋಟತಟ್ಟು ಗ್ರಾಮ ಪಂಚಾಯತ್,ಡಾ.ಶಿವರಾಮ ಕಾರಂತ ಪ್ರತಿಷ್ಠಾನ (ರಿ.)ಕೋಟ, ಡಾ.ಶಿವರಾಮ ಕಾರಂತ ಜನ್ಮದಿನೋತ್ಸವ ಅಂಗವಾಗಿ, ಕೋಟ ವಿವೇಕ ವಿದ್ಯಾಸಂಸ್ಥೆ ಆವರಣದಲ್ಲಿ ನಡೆದ, ಉಡುಪಿ ಮತ್ತು ದ.ಕನ್ನಡ ಜಿಲ್ಲೆಗಳ ಪಂಚಾಯತ್ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳ , ಹೊಳಪು 2021 – ಕ್ರೀಡೋತ್ಸವ -ಸಾಂಸ್ಕೃತಿಕ ಸ್ಪರ್ದೆಗಳಿಗೆ ಶನಿವಾರ ಚಾಲನೆ ನೀಡಲಾಯಿತು.
ಅವದೂತ ವಿನಯ್ ಗುರೂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯಾವುದೇ ಜಾತಿ ಮತ ಭೇದ ನೋಡದೆ ಐಕ್ಯತೆಯ ಸಂದೇಶ ಸಾರುವ ಹೊಳಪು ಕಾರ್ಯಕ್ರಮ ಆಯೋಜಿಸುವ ಮೂಲಕ ಕೋಟ ಶ್ರೀನಿವಾಸ ಪೂಜಾರಿಯವರು ಡಾ. ಶಿವರಾಮ ಕಾರಂತರಿಗೆ ನಿಜವಾದ ಗೂರು ದಕ್ಷಿಣೆ ನೀಡುತ್ತಿದ್ದಾರೆ ಎಂದರು.
ದ.ಕನ್ನಡ ಜಿಲ್ಲೆ ಸಂಸದ ನಳಿನ್ ಕುಮಾರ್ ಕಟೀಲು ಉಡುಪಿ ಮತ್ತು ದ.ಕನ್ನಡ ಜಿಲ್ಲೆಗಳ ಪಂಚಾಯತ್ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳ ಪಥ ಸಂಚಲನದ ಗೌರವ ರಕ್ಷೆ ಸ್ವೀಕರಿಸಿದರು. ಉಡುಪಿ ಶಾಸಕ ರಘುಪತಿ ಭಟ್ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿದರು. ವಿಧಾನಪರಿಷತ್ ಸದಸ್ಯ ಅಪ್ಪಾಜಿಗೌಡ ಪ್ರತಿಜ್ಞಾವಿಧಿ ಭೋದಿಸಿದರು. ಶಾಸಕ ಯು.ಟಿ ಖಾದರ್ ಕ್ರೀಡಾಜ್ಯೋತಿ ಸ್ವೀಕರಿಸಿದರು. ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ಗೌಡ ಬಲೂನು ಹಾರಿ ಬಿಡುವುದರ ಮೂಲಕ ಕ್ರೀಡೆಗಳಿಗೆ ಚಾಲನೆ ನೀಡಿದರು. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತದ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಪಥ ಸಂಚಲನಕ್ಕೆ ಚಾಲನೆ ನೀಡಿದರು. ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದಿನೇಶ್ ಕುಂದರ್ ಸ್ವಾಗತಿಸಿದರು. ನರೇಂದ್ರ ಕುಮಾರ್ ಕೋಟ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಹಿಂದೂ ಧಾರ್ಮಿಕ ಮತ್ತು ಧರ್ಮದಾಯ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯತ್ ಅದ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ರಾಷ್ಟ್ರೀಯ ಮಹಿಳಾ ಅಯೋಗದ ಸದಸ್ಯೆ ಶ್ಯಾಮಲ ಎಸ್ ಕುಂದರ್, ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಗ್ರಾಮೀಣಾಭಿವೃಧ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅತೀಕ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ ಮತ್ತು ದ.ಕನ್ನಡ ಜಿಲ್ಲೆಗಳ ಪಂಚಾಯತ್ರಾಜ್ ಮತ್ತು ನಗರ ಸ್ಥಳೀಯಾಡಳಿತ ಪ್ರತಿನಿಧಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು, ಪಥ ಸಂಚಲನದಲ್ಲಿ ವಿವಿಧ ಸ್ಥಬ್ದಚಿತ್ರಗಳ ಪ್ರದರ್ಶನ, ಯಕ್ಷಗಾನದ ವೇಷಗಳು, ತಟ್ಟೆರಾಯ ವೇಷಗಳು, ಕೊರಗರ ಡೋಲು ವಾದನ, ಕಂಬಳ ಕೋಣಗಳು, ಕಹಳೆ ವಾದನ, ಕೋವಿಡ್ ಕುರಿತು ಜಾಗೃತಿ ಮೂಡಿಸುವ ಸ್ಥಬ್ದಚಿತ್ರ, ಕೋವಿಡ್ ಲಸಿಕೆ ಕುರಿತ ಸ್ಥಬ್ದಚಿತ್ರಗಳು, ಸಾಂಪ್ರದಾಯಿಕ ಧರಿಸು ತೊಟ್ಟ ಜನಪ್ರತಿನಿಧಿಗಳ ತಂಡಗಳು ಪಥ ಸಂಚಲನ ನಡೆಯಿತು.
ಉಡುಪಿ ಮತ್ತು ದ.ಕನ್ನಡ ಜಿಲ್ಲೆಗಳ ಪಂಚಾಯತ್ ರಾಜ್ ಕ್ಷೇತ್ರದಲ್ಲಿ ಗಣನೀಯ ಸಾಧನೆ ತೋರಿದ ಪಂಚಾಯತ್ ಗಳಿಗೆ ಬಹುಮಾನ ವಿತರಿಸಲಾಯಿತು. ಪಥ ಸಂಚಲನದಲ್ಲಿ ವಿಜೇತ ತಂಡಕ್ಕೆ ಬಹುಮಾನ ನೀಡಲಾಯಿತು.