ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಗೊಂಬೆಯಾಟ ಟ್ರಸ್ಟ್‌ನ ಬೆಳ್ಳಿ ಹಬ್ಬದ ಸಂಭ್ರಮ (1995-2020) ಹಾಗೂ ಸೂತ್ರ ಕ್ರೀಡೆಯ ಗಾರುಡಿಗ ಕೊಗ್ಗ ದೇವಣ್ಣ ಕಾಮತ್ ಜನ್ಮ ಶತಮಾನೋತ್ಸವ (1921-2021)ದ ಅಂಗವಾಗಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಗೊಂಬೆಮನೆಯಲ್ಲಿ ಪ್ರತಿಭೆ ನಿಮ್ಮದು ವೇದಿಕೆ ನಮ್ಮದು ನಿರಂತರ ಸರಣಿ ಕಾರ್ಯಕ್ರಮದಡಿ 64ನೇ ತಿಂಗಳ ಕಾರ್ಯಕ್ರಮ ನಡೆಯಿತು.
ಡಾ. ಹೆಚ್. ಆರ್. ಹೆಬ್ಬಾರ್ ಮತ್ತು ಡಾ. ಪುಷ್ಪಗಂಧಿನಿ ಹಾಗೂ ಸದಾಶಿವ ಐತಾಳ್‌ರವರನ್ನೂ ಸನ್ಮಾನಿಸಲಾಯಿತು.
ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕುಂದಾಪುರದ ಕಾರ್ತಿಕ್ ಸ್ಕ್ಯಾನಿಂಗ್ ಸೆಂಟರ್ ನ ಡಾ. ವೆಂಕಟರಾಮ ಉಡುಪ, ಡಾ. ಹೆಚ್. ಆರ್. ಹೆಬ್ಬಾರ್, ಡಾ. ಪುಷ್ಪಗಂಧಿನಿ, ಡಾ. ಕಾಶೀನಾಥ್ ಪೈ ಗಂಗೊಳ್ಳಿ, ಮತ್ತು ಅಕಾಡೆಮಿಯ ಅಧ್ಯಕ್ಷರಾದ ಭಾಸ್ಕರ್ ಕೊಗ್ಗ ಕಾಮತ್ ಉಪಸ್ಥಿತರಿದ್ದರು.
ಡಾ.ಹೆಚ್. ಆರ್. ಹೆಬ್ಬಾರ್ ರವರ ಹಿಂದೂಸ್ಥಾನಿ ಶಾಸ್ತ್ರೀಯ ಗಾಯನ ನಡೆಯಿತು. ಶಿಕ್ಷಕ ನಾಗೇಶ್ ಶ್ಯಾನುಭಾಗ್ ಕಾರ್ಯಕ್ರಮ ನಿರೂಪಿಸಿದರು