Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊರೊನಾ ಸುರಕ್ಷತಾ ನಿಯಮ ಪಾಲಿಸದಿದ್ದರೆ ದಂಡದ ಜೊತೆಗೆ ಪ್ರಕರಣ ದಾಖಲು: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಕೊರೊನಾ ಸುರಕ್ಷತಾ ನಿಯಮ ಪಾಲಿಸದಿದ್ದರೆ ದಂಡದ ಜೊತೆಗೆ ಪ್ರಕರಣ ದಾಖಲು: ಜಿಲ್ಲಾಧಿಕಾರಿ

    Updated:17/03/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಕೋವಿಡ್ ಎರಡನೇ ಅಲೆಯು ಪ್ರಾರಂಭವಾಗಿದ್ದು, ಸಾರ್ವಜನಿಕರು ಕೋವಿಡ್ ಸುರಕ್ಷತಾ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸುವುದರ ಜೊತೆಗೆ ಪ್ರಕರಣ ದಾಖಲು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಸಿದ್ದಾರೆ.

    Click Here

    Call us

    Click Here

    ಅವರು ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ, ಎರಡನೇ ಹಂತದ ಕೋವಿಡ್ ಲಸಿಕೆ ಪಡೆದು ಮಾತನಾಡಿದರು.

    ಸಾರ್ವಜನಿಕರು ಜಾಗೃತರಾಗಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಶಾಪಿಂಗ್ ಮಾಲ್ಗಳಲ್ಲಿ, ಅಂಗಡಿಗಳಿಗೆ ತೆರಳುವ ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದೆ ಅಂಗಡಿಗೆ ಬರುವ ಸಾರ್ವಜನಿಕರ ಪ್ರವೇಶವನ್ನು ಅಂಗಡಿ ಮಾಲೀಕರು ನಿಷೇಧಿಸಬೇಕು. ಇಲ್ಲದಿದ್ದಲ್ಲಿ ಅಂತಹ ಅಂಗಡಿ ಮಾಲೀಕರ ಪರವಾನಿಗೆಯನ್ನು ರದ್ದು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದರು.

    ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವವರು 72 ಗಂಟೆಯ ಮೊದಲಿನ ಕೊರೊನಾದ ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ತರಬೇಕು. ಹೊರ ರಾಜ್ಯಗಳಿಂದ ನೆಗೆಟಿವ್ ವರದಿಯನ್ನು ತಾರದೆ ಬಂದವರ ಬಗ್ಗೆ ಸಾರ್ವಜನಿಕರು ತಕ್ಷಣ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಬೇಕು. ಅವರಿಗೆ ತಕ್ಷಣ ಕೊರೊನಾ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಹೇಳಿದರು.

    60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ 45 ರಿಂದ 59 ವರ್ಷದೊಳಗಿನ ಇತರೆ ಕಾಯಿಲೆಗಳಿಂದ ಬಳುತ್ತಿರುವವರು ಕೊರೊನಾ ಲಸಿಕೆಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಲಸಿಕೆಯನ್ನು ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ನೀಡಲಾಗುತ್ತಿದೆ. ಎಲ್ಲಾ ಸಾರ್ವಜನಿಕರು ಇದರ ಸದುಪಯೋಗ ಪಡೆದು ಕೊಳ್ಳಬೇಕು ಎಂದರು.

    Click here

    Click here

    Click here

    Click Here

    Call us

    Call us

    ಮುಂಚೂಣಿ ಕಾರ್ಯಕರ್ತರು ಲಸಿಕೆಯನ್ನು ಪಡೆದುಕೊಳ್ಳುವುದರಲ್ಲಿ ಉಡುಪಿ ಜಿಲ್ಲೆಯು ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದ್ದು, ಹಿರಿಯ ನಾಗರಿಕರು ಕೊರೊನಾ ಲಸಿಕೆಯನ್ನು ಪಡೆದುಕೊಳ್ಳುವುದರಲ್ಲಿ 6 ನೇ ಸ್ಥಾನದಲ್ಲಿದೆ. ಈಗಾಗಲೇ ಜಿಲ್ಲೆಯ 17,000 ಕ್ಕೂ ಅಧಿಕ ಹಿರಿಯ ನಾಗರಿಕರು ಹಾಗೂ ಇತರೆ ಕಾಯಿಲೆಯಿಂದ ಬಳಲುತ್ತಿರುವವರಿಗೆ ಲಸಿಕೆಯನ್ನು ನೀಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಕೋವಿಡ್-19 ಲಸಿಕೆಯನ್ನು ಪಡೆಯಲು ಬಂದರೆ ಹೆಚ್ಚು ಔಷಧಿ ಕೇಂದ್ರಗಳನ್ನು ರಚಿಸಿ ಲಸಿಕೆಯನ್ನು ನೀಡಲಾಗುವುದು ಎಂದು ಡಿಸಿ ತಿಳಿಸಿದರು.

    ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸಹ ಎರಡನೇ ಹಂತದ ಕೋವಿಡ್ ಲಸಿಕೆ ಪಡೆದರು. ಡಿಹೆಚ್ಓ ಡಾ.ಸುಧೀರ್ ಚಂದ್ರ ಸೂಡಾ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಜಿಲ್ಲಾ ಲಸಿಕ ಅಧಿಕಾರಿ ಡಾ. ಎಂ.ಜಿ.ರಾಮ, ಕೋವಿಡ್ ವಿಶೇಷ ನೋಡೆಲ್ ಅಧಿಕಾರಿ ಡಾ. ಪ್ರೇಮಾನಂದ್ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    sixteen − 14 =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.