ಕುಂದಾಪುರ: ನೆಹರು ಮೈದಾನದಲ್ಲಿರುವ ಆಶ್ರಮ ಶಾಲೆಯಲ್ಲಿ ರೋಟರಿ ಕ್ಲಬ್ ಕುಂದಾಪುರ ಹಾಗೂ ಆನ್ಸ್ ಕ್ಲಬ್ ಮತ್ತು ರೋಟರ‍್ಯಾಕ್ಟ್ ಕ್ಲಬ್ ಕುಂದಾಪುರದ ಆಶ್ರಯದಲ್ಲಿ 69ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಆನ್ಸ್ ಕ್ಲಬ್ ಪೂರ್ವಾಧ್ಯಕ್ಷೆ ರತ್ನಾ ವಿ. ಆರ್. ಕೆ. ಹೊಳ್ಳ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು, ಆನ್ಸ್ ಕ್ಲಬ್ ಅಧ್ಯಕ್ಷೆ ಶ್ರೀಮತಿ ಭಾರತಿ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ ಸುನೇತ್ರಾ ಎಸ್. ಕೊಟ್ಯಾನ್, ರೋಟರ‍್ಯಾಕ್ಟ್ ಕ್ಲಬ್ ಕುಂದಾಪುರದ ಅಧ್ಯಕ್ಷ ರಾಘವೇಂದ್ರ ಕೆ.ಸಿ, ಆಶ್ರಮ ಶಾಲೆಯ ಮುಖ್ಯ ಮೇಲ್ವಿಚಾರಕ ರಮೇಶ್, ಇಂಟರ‍್ಯಾಕ್ಟ್ ಛೇರ್‌ಮೆನ್ ವೆಂಕಟೇಶ ಪ್ರಭು, ರೋಟರಿ ಕಾರ್ಯದರ್ಶಿ ಸಂತೋಷ ಕೋಣಿ ಇನ್ನಿತರರು ಉಪಸ್ಥಿತರಿದ್ದರು.